‘ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ’: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ!
ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಒಳ ಮೀಸಲಾತಿ ವಿಚಾರ ಸಂಕಿರಣದಲ್ಲಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. 'ಆರಂಭದಲ್ಲಿ 4-5 ಜನರನ್ನು ಡಿಸಿಎಂ ಮಾಡುವ ಯೋಜನೆಯಿತ್ತು, ಆದರೆ ಒಬ್ಬರಿಗಷ್ಟೇ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಜಿ. ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿಸಿದ್ದು ನಾನೇ' ಎಂದು ಸಿದ್ದರಾಮಯ್ಯ ಬಹಿರಂಗಪಡಿಸಿದ್ದಾರೆ.
ಬೆಂಗಳೂರು, ಆಗಸ್ಟ್ 26: ಗಾಂಧಿ ಭವನದಲ್ಲಿ ನಡೆದ ‘ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕಾರ್ಯಕ್ರಮದಲ್ಲಿ ಎಸ್‌ಸಿ ಸಮುದಾಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಾತನಾಡುತ್ತಿದ್ದಾಗ, ಸಭಿಕರೊಬ್ಬರು ದಲಿತ ಸಿಎಂ ವಿಚಾರವನ್ನು ಪ್ರಸ್ತಾಪಿಸಿದರು. ಇದರಿಂದ ಕೊಂಚ ಭಾವೋದ್ವೇಗಕ್ಕೊಳಗಾದ ಸಿದ್ದರಾಮಯ್ಯ, “ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ಯಾರು? ಆರಂಭದಲ್ಲಿ ನಾಲ್ಕೈದು ಜನರನ್ನು ಡಿಸಿಎಂ ಮಾಡುವ ಯೋಜನೆಯಿತ್ತು. ಆದರೆ, ಒಬ್ಬರಿಗಷ್ಟೇ ಡಿಸಿಎಂ ಹುದ್ದೆ ನೀಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಿ ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿಸಿದ್ದು ನಾನೇ” ಎಂದು ನೇರವಾಗಿ ಹೇಳುವ ಮೂಲಕ ಹೆಚ್ಚುವರಿ ಡಿಸಿಎಂ ಚರ್ಚೆಗೆ ಹೊಸ ತಿರುವು ನೀಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

