‘ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ’: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ!

Edited By:

Updated on: Aug 26, 2026 | 11:06 AM

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಒಳ ಮೀಸಲಾತಿ ವಿಚಾರ ಸಂಕಿರಣದಲ್ಲಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. 'ಆರಂಭದಲ್ಲಿ 4-5 ಜನರನ್ನು ಡಿಸಿಎಂ ಮಾಡುವ ಯೋಜನೆಯಿತ್ತು, ಆದರೆ ಒಬ್ಬರಿಗಷ್ಟೇ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಜಿ. ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿಸಿದ್ದು ನಾನೇ' ಎಂದು ಸಿದ್ದರಾಮಯ್ಯ ಬಹಿರಂಗಪಡಿಸಿದ್ದಾರೆ.

ಬೆಂಗಳೂರು, ಆಗಸ್ಟ್ 26: ಗಾಂಧಿ ಭವನದಲ್ಲಿ ನಡೆದ ‘ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ’ದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕಾರ್ಯಕ್ರಮದಲ್ಲಿ ಎಸ್‌ಸಿ ಸಮುದಾಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಾತನಾಡುತ್ತಿದ್ದಾಗ, ಸಭಿಕರೊಬ್ಬರು ದಲಿತ ಸಿಎಂ ವಿಚಾರವನ್ನು ಪ್ರಸ್ತಾಪಿಸಿದರು. ಇದರಿಂದ ಕೊಂಚ ಭಾವೋದ್ವೇಗಕ್ಕೊಳಗಾದ ಸಿದ್ದರಾಮಯ್ಯ, “ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ಯಾರು? ಆರಂಭದಲ್ಲಿ ನಾಲ್ಕೈದು ಜನರನ್ನು ಡಿಸಿಎಂ ಮಾಡುವ ಯೋಜನೆಯಿತ್ತು. ಆದರೆ, ಒಬ್ಬರಿಗಷ್ಟೇ ಡಿಸಿಎಂ ಹುದ್ದೆ ನೀಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಿ ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿಸಿದ್ದು ನಾನೇ” ಎಂದು ನೇರವಾಗಿ ಹೇಳುವ ಮೂಲಕ ಹೆಚ್ಚುವರಿ ಡಿಸಿಎಂ ಚರ್ಚೆಗೆ ಹೊಸ ತಿರುವು ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 26, 2026 08:34 AM
Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More