ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ

Updated on: May 23, 2025 | 10:44 PM

ಸಹ-ನಟಿಯ ಮೇಲೆ ನಟ ಮಡೆನೂರು ಮನು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಎದುರಾಗಿದೆ. ಆದರೆ ಸಂತ್ರಸ್ತೆಯನ್ನು ತನ್ನ ಹೆಂಡತಿ ಎಂದು ಮಡೆನೂರು ಮನು ಅವರು ಹೇಳಿರುವ ಆಡಿಯೋ ಲಭ್ಯವಾಗಿದೆ. ಈ ಪ್ರಕರಣದಲ್ಲಿ ಹಲವು ಮಾಹಿತಿಗಳು ಬಹಿರಂಗ ಆಗುತ್ತಿವೆ. ಇದರಿಂದ ಹೊಸ ಹೊಸ ಟ್ವಿಸ್ಟ್​ಗಳು ಸಿಗುತ್ತಿವೆ.

ಸಹ-ನಟಿಯ ಮೇಲೆ ‘ಕಾಮಿಡಿ ಕಿಲಾಡಿಗಳು’ (Comedy Khiladigalu) ನಟ ಮಡೆನೂರು ಮನು ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ ಸಂತ್ರಸ್ತೆಯನ್ನು ತನ್ನ ಪತ್ನಿ ಎಂದು ಮಡೆನೂರು ಮನು ಒಪ್ಪಿಕೊಂಡಿರುವ ಆಡಿಯೋ ಲಭ್ಯವಾಗಿದೆ. ಈ ಪ್ರಕರಣದಲ್ಲಿ ಹಲವು ಮಾಹಿತಿಗಳು ಬಹಿರಂಗ ಆಗುತ್ತಿವೆ. ಇದರಿಂದ ಹೊಸ ಹೊಸ ಟ್ವಿಸ್ಟ್​ಗಳು ಸಿಗುತ್ತಿವೆ. ‘ತಾಳೆ ಕಟ್ಟಿ ಸಂಸಾರ ನಡೆಸುತ್ತಿದ್ದೇನೆ. ಆದರೆ ಇತ್ತೀಚೆಗೆ ಅವಳಿಗೆ ಸಮಯ ಕೊಡಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಜಗಳ ಆಗಿದೆ. ತಾಳೆ ಕಟ್ಟಿದ್ದೇನೆ. ಅವಳೇ ನನ್ನ ಹೆಂಡತಿ. ಇಷ್ಟ ಬಂದಾಗ ಬರುತ್ತೇನೆ, ಇಷ್ಟ ಬಂದಾಗ ಹೋಗುತ್ತೇನೆ. ನಮ್ಮ ಮೊದಲ ಹೆಂಡತಿಗೂ ಕೂಡ ಇದನ್ನೇ ಹೇಳುತ್ತೇನೆ’ ಎಂದು ಮಡೆನೂರು ಮನು (Madenur Manu) ಮಾತನಾಡಿರುವ ಆಡಿಯೋ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More