ಅತ್ಯಾಚಾರ ಆರೋಪಿ ಮಡೆನೂರು ಮನುಗೆ ಈಗ ಶುರುವಾಯ್ತು ರಿಯಲ್ ಸಂಕಷ್ಟ

Updated on: May 26, 2025 | 8:49 PM

ನಟ ಮಡೆನೂರು ಮನು ವಿರುದ್ಧ ಗಂಭೀರ ಆರೋಪಗಳಿವೆ. ಅವರ ವಿರುದ್ಧ ಚಿತ್ರರಂಗ ಕೂಡ ಗರಂ ಆಗಿದೆ. ಸಹ-ನಟಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮನು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದು, ಅದಕ್ಕೂ ಮುನ್ನ ಮೆಡಿಕಲ್ ಟೆಸ್ಟ್ ಮಾಡಿಸಲಾಯಿತು.

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನು (Madenur Manu) ವಿರುದ್ಧ ಗಂಭೀರ ಆರೋಪಗಳಿವೆ. ಚಿತ್ರರಂಗ ಕೂಡ ಮನು ವಿರುದ್ಧ ಗರಂ ಆಗಿದೆ. ಸ್ನೇಹಿತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮನು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 14 ದಿನಗಳ ಕಾಲ ನ್ಯಾಯಾಂಗ ಬಂಧನ (Judicial Custody) ವಿಧಿಸಿದ್ದು, ಇಂದು (ಮೇ 26) ಮೆಡಿಕಲ್ ಟೆಸ್ಟ್ (Medical Test) ಮಾಡಿಸಲಾಯಿತು. ಆ ಸಂದರ್ಭದ ದೃಶ್ಯ ಇಲ್ಲಿದೆ. ಮನು ಕೇಸ್​ ತನಿಖೆ ವೇಳೆ ಹಲವು ಶಾಕಿಂಗ್ ವಿಚಾರಗಳು ಬಹಿರಂಗ ಆಗುತ್ತಿವೆ. ಈಗ ಜೈಲುವಾಸ ಅನುಭವಿಸಬೇಕಿರುವ ಕಾರಣ ಮನುಗೆ ಅಸಲಿ ಸಂಕಷ್ಟ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More