ಶಿವಣ್ಣ ಬಗ್ಗೆ ಅವಹೇಳನಕಾರಿ ಮಾತು: ಮಡೆನೂರು ಮನು ವಿರುದ್ಧ ಚೇಂಬರ್ ಖಡಕ್ ನಿರ್ಧಾರ
‘ಕಾಮಿಡಿ ಕಿಲಾಡಿಗಳು’ ನಟ ಮಡೆನೂರು ಮನು ವಿವಾದದಲ್ಲಿ ಸಿಲುಕಿದ್ದಾರೆ. ಚಂದನವನದ ಹಿರಿಯ ನಟರ ಬಗ್ಗೆ ಮನು ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋ ಕ್ಲಿಪ್ ವೈರಲ್ ಆಗಿದೆ. ಶಿವಣ್ಣ, ಧ್ರುವ ಸರ್ಜಾ ಮುಂತಾದವರ ಬಗ್ಗೆ ಅವರು ಆಕ್ಷೇಪಾರ್ಹ ರೀತಿಯಲ್ಲಿ ಮಾತನಾಡಿದ್ದಾರೆ. ಹಾಗಾಗಿ ಮನು ವಿರುದ್ಧ ಕ್ರಮ ತೆಗೆದುಕೊಳ್ಳಲು ಫಿಲ್ಮ್ ಚೇಂಬರ್ ತೀರ್ಮಾನಿಸಿದೆ.
ನಟ ಮಡೆನೂರು ಮನು (Madenur Manu) ಹಲವು ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟರ ಬಗ್ಗೆ ಅವರು ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋ ಕ್ಲಿಪ್ ವೈರಲ್ ಆಗಿದೆ. ಶಿವರಾಜ್ಕುಮಾರ್ (Shivarajkumar), ಧ್ರುವ ಸರ್ಜಾ ಮುಂತಾದ ನಟರ ಬಗ್ಗೆ ಮನು ಆಕ್ಷೇಪಾರ್ಹ ರೀತಿಯಲ್ಲಿ ಮಾತನಾಡಿದ್ದಾರೆ. ಹಾಗಾಗಿ ಮನು ವಿರುದ್ಧ ಕ್ರಮ ತೆಗೆದುಕೊಳ್ಳಲು ವಾಣಿಜ್ಯ ಮಂಡಳಿ (Karnataka Film Chamber of Commerce) ತೀರ್ಮಾನಿಸಿದೆ. ಸಿನಿಮಾ ಮತ್ತು ಕಿರುತೆರೆಯಲ್ಲಿ ಮನು ವಿರುದ್ಧ ಅಸಹಕಾರ ತೋರಲು ನಿರ್ಧರಿಸಲಾಗಿದೆ. ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಸಲಾಗಿದೆ. ಬಳಿಕ ಸುದ್ದಿಗೋಷ್ಠಿ ನಡೆಸಿ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ. ನರಸಿಂಹಲು ಅವರು ಮಾಹಿತಿ ನೀಡಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

