ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು

Updated on: Jun 25, 2025 | 5:41 PM

ವೈರಲ್ ಆಡಿಯೋಗೆ ಸಂಬಂಧಿಸಿದಂತೆ ಶಿವರಾಜ್​ಕುಮಾರ್ ಅವರ ಬಳಿ ಕ್ಷಮೆ ಕೇಳಲು ನಟ ಮಡೆನೂರು ಮನು ಪ್ರಯತ್ನಿಸುತ್ತಿದ್ದಾರೆ. ಆದರೆ ಶಿವರಾಜ್​ಕುಮಾರ್ ಅವರನ್ನು ಭೇಟಿ ಮಾಡಲು ಮನುಗೆ ಸಾಧ್ಯವಾಗಿಲ್ಲ. ಶಿವಣ್ಣನ ಮನೆ ಮುಂದೆ ಅವರು ಕುಟುಂಬ ಸಮೇತರಾಗಿ ಕಾಯುತ್ತಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shivarajkumar) ಬಗ್ಗೆ ನಟ ಮಡೆನೂರು ಮನು ಆಕ್ಷೇಪಾರ್ಹವಾಗಿ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಇದರಿಂದ ಶಿವಣ್ಣ ಅಭಿಮಾನಿಗಳು ಗರಂ ಆಗಿದ್ದರು. ಆ ಆಡಿಯೋ ತಮ್ಮದಲ್ಲ ಎಂದು ಮಡೆನೂರು ಮನು (Madenur Manu) ವಾದ ಮಾಡಿದ್ದಾರೆ. ಆದರೆ ಶಿವರಾಜ್​ಕುಮಾರ್ ಅವರಲ್ಲಿ ಕ್ಷಮೆ ಕೇಳಲು ಅವರು ನಿರ್ಧರಿಸಿದ್ದಾರೆ. ಆದರೆ ಶಿವರಾಜ್​ಕುಮಾರ್ ಅವರನ್ನು ಭೇಟಿ ಮಾಡಲು ಮನುಗೆ ಸಾಧ್ಯವಾಗಿಲ್ಲ. ಶಿವಣ್ಣನ ಮನೆ ಎದುರು ಅವರು ಕುಟುಂಬ ಸಮೇತರಾಗಿ ಕಾಯುತ್ತಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More