‘ನನ್ನ ಗಂಡನ ಪರ ನಿಲ್ಲುತ್ತೇನೆ, ನ್ಯಾಯ ಸಿಗುವವರೆಗೆ ಹೋರಾಡುತ್ತೇನೆ’; ಆರೋಪಿ ಮಡೆನೂರು ಮನು ಪತ್ನಿಯ ದೃಢ ನಿಲುವು

Updated on: May 23, 2025 | 2:26 PM

ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಬಂದಿದೆ. ಈ ಪ್ರಕರಣದಲ್ಲಿ ಅವರ ಪತ್ನಿ ಯಾವ ರೀತಿ ಪ್ರತಿಕ್ರಿಯಿಸಬಹುದು ಎನ್ನುವ ಕುತೂಹಲ ಇತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಅವರು ಪತಿಯ ಪರವಾಗಿ ಬ್ಯಾಟ್ ಬೀಸಿದ್ದಾರೆ. ಪತಿಗೆ ನ್ಯಾಯ ಸಿಗೋವರೆಗೆ ಹೋರಾಡುತ್ತೇನೆ ಎಂದಿದ್ದಾರೆ.ರ

ಮಡೆನೂರು ಮನು (Madenuru Manu) ಅವರ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಸಹಕಲಾವಿದೆ ಆಗಿದ್ದವರಿಂದಲೇ ಈ ರೀತಿಯ ಆರೋಪ ಕೇಳಿ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮನು ಅವರ ಪತ್ನಿ ಮಾತನಾಡಿದ್ದಾರೆ. ಮನು ಪತಿಯ ಪರ ಬ್ಯಾಟ್ ಬೀಸಿದ್ದಾರೆ. ‘ನನ್ನ ಪತಿಯನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ನನ್ನ ಗಂಡನ ಪರ ನಾನು ನಿಲ್ಲುತ್ತೇನೆ. ಅವನು ತಪ್ಪು ಮಾಡಿಲ್ಲ. ನ್ಯಾಯ ಸಿಗೋವರೆಗೆ ಹೋರಾಡುತ್ತೇನೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.