ಮಧು ಬಂಗಾರಪ್ಪ ಸಣ್ಣತನದ ರಾಜಕಾರಣ ಮತ್ತು ಅಧಿಕಾರಿಗಳನ್ನು ಬೆದರಿಸುವುದು ನಿಲ್ಲಿಸಬೇಕು: ಬಿವೈ ರಾಘವೇಂದ್ರ

ಮಧು ಬಂಗಾರಪ್ಪ ಸಣ್ಣತನದ ರಾಜಕಾರಣ ಮತ್ತು ಅಧಿಕಾರಿಗಳನ್ನು ಬೆದರಿಸುವುದು ನಿಲ್ಲಿಸಬೇಕು: ಬಿವೈ ರಾಘವೇಂದ್ರ

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 15, 2024 | 6:45 PM

ಧೀಮಂತ ನಾಯಕರೆನಿಸಿಕೊಂಡಿದ್ದ ಎಸ್ ಬಂಗಾರಪ್ಪನರ ಪುತ್ರನಾಗಿರುವ ಮಧು ಬಂಗಾರಪ್ಪನವರಿಂದ ಸಣ್ಣತನದ ರಾಜಕಾರಣ ನಿರೀಕ್ಷಿಸಿರಲಿಲ್ಲ, ರವಿವಾರದಂದು ನಡೆದ ಸಭೆಯೊಂದರಲ್ಲಿ ಅವರು ಮುಖ್ಯಮಂತ್ರಿಗಳ ಮುಂದೆ ತಾನು ವಿರೋಧಪಕ್ಷದ ಶಾಸಕರನ್ನು ಹದ್ದುಬಸ್ತುನಲ್ಲಿಟಿರುವುದಾಗಿ ಕೊಚ್ಚಿಕೊಳ್ಳುತ್ತಿದ್ದರು, ಈ ಬಗೆಯ ದ್ವೇಷದ ರಾಜಕಾರಣದಿಂದ ಯಾರಿಗೂ ಪ್ರಯೋಜನವಿಲ್ಲ ಎಂದು ರಾಘವೇಂದ್ರ ಹೇಳಿದರು.

ಶಿವಮೊಗ್ಗ: ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ವಿರೋಧ ಪಕ್ಷದ ನಾಯಕರ ಬಗ್ಗೆ ಮಾತಾಡುವ ನಾಲಗೆ ಹರಿಬಿಡುವ ವಿಚಾರ ಕನ್ನಡಿಗರಿಗೆ ಗೊತ್ತಿರದ ವಿಚಾರವೇನೂ ಅಲ್ಲ. ನಗರದಲ್ಲಿಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಶಿವಮೊಗ್ಗದ ಬಿಜೆಪಿ ಸಂಸದ ಬಿವೈ ರಾಘವೇಂದ್ರ (BY Raghavendra), ಸಚಿವ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು, ಅಧಿಕಾರಿಗಳ ಮೇಲೆ ದರ್ಪ ಪ್ರದರ್ಶಿಸುತ್ತಿದ್ದಾರೆ ಎಂದು ಹೇಳಿದರು. ಶಿವಮೊಗ್ಗ ಜಿಲ್ಲೆಯಲ್ಲಿ 100 ಬಿಎಸ್ ಎನ್ ಎಲ್ ಟಾವರ್​ಗಳಿಗೆ (BSNL towers) ಕೇಂದ್ರ ಅರಣ್ಯ ಸಚಿವಾಲಯದಿಂದ ತಾವು ಕ್ಲೀಯರನ್ಸ್ ಕೊಡಿಸಿದ್ದು ಇನ್ನೇನು ಕೆಲಸ ಆರಂಭಾವಾಗಲಿದೆ ಎಂದ ರಾಘವೇಂದ್ರ, ಮಧು ಬಂಗಾರಪ್ಪ ಅಧಿಕಾರಿಗಳನ್ನು ಹೆದರಿಸುವ ಭಯ ಹುಟ್ಟಿಸುವ ಕೆಲಸದಲ್ಲಿ ತೊಡಗಿದ್ದಾರೆಂದು ಹೇಳಿದರು. ತಾನು ನಡೆಸುವ ಸಭೆಗಳಿಗೆ ಹಾಜರಾಗುವ ಆಧಿಕಾರಿಗಳಿಗೆ ಮಧು ಬಂಗಾರಪ್ಪ ಗದರುತ್ತಾರೆ, ಮೀಟಿಂಗ್ ಹಾಜರಾಗಬಾರದೆಂದು ತಾಕೀತು ಮಾಡುತ್ತಾರೆ ಎಂದು ರಾಘವೇಂದ್ರ ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ಇಂಥ ಸಣ್ಣತನ ಪ್ರದರ್ಶಿಸಬಾರದು ಎಂದು ಸಂಸದ ಖಾರವಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ