ತುಮಕೂರು: ದೂರು ನೀಡಲು ಬಂದ ಮಹಿಳೆಗೆ ಡಿವೈಎಸ್ಪಿಯಿಂದ ಲೈಂಗಿಕ ಕಿರುಕುಳ
ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ಅವರು ಜಮೀನು ವಿವಾದದ ಬಗ್ಗೆ ದೂರು ನೀಡಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾರೆ. ಈ ಘಟನೆಯು ರಾಜ್ಯದ ಗೃಹ ಸಚಿವರ ತವರು ಜಿಲ್ಲೆಯಲ್ಲಿ ನಡೆದಿರುವುದು ಪೊಲೀಸ್ ಇಲಾಖೆಗೆ ಮುಜುಗರ ತಂದಿದೆ.ಪೊಲೀಸ್ ಅಧಿಕಾರಿಯ ದುರ್ವರ್ತನೆಗೆ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ.
ತುಮಕೂರು, ಜನವರಿ 03: ದೂರು ನೀಡಲು ಬಂದ ಮಹಿಳೆಯ ಜೊತೆ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ (DYSP Ramchandrappa) ಅಸಭ್ಯವಾಗಿ ವರ್ತಿಸಿದ್ದಾರೆ. ಡಿವೈಎಸ್ಪಿ ರಾಮಚಂದ್ರಪ್ಪ ಹದ್ದು ಮೀರಿ ವರ್ತನೆಯ ವಿಡಿಯೋ ವೈರಲ್ ಆಗಿದೆ. ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ (G Parameshwar) ತವರು ಜಿಲ್ಲೆಯಲ್ಲೇ ಇಂತಹ ಕೃತ್ಯ ನಡೆದಿರುವುದು ಇಡೀ ಪೊಲೀಸ್ ಇಲಾಖೆಯೆ (Police Department) ತಲೆ ತಗ್ಗಿಸುವಂತೆ ಮಾಡಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಮಹಿಳೆ ಪಾವಗಡದಿಂದ ಡಿವೈಎಸ್ಪಿ ಕಚೇರಿಗೆ ಬಂದಿದ್ದರು. ಮಹಿಳೆಯನ್ನು ಏಕಾಂತ ಕೊಠಡಿಗೆ ಕರೆದುಕೊಂಡು ಹೋದ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.
ಡಿವೈಎಸ್ಪಿ ಕಚೇರಿಗೆ ಮಹಿಳೆಯ ಜೊತೆ ಆಗಮಿಸಿದ್ದ ಅನಿಲ್ ಎಂಬಾತನು ವಿಡಿಯೋ ಸೆರೆ ಹಿಡಿದಿದ್ದಾರೆ ಎಂದು ಶಂಕಿಸಲಾಗಿದೆ. ಬಳಿಕ, ಬಳಿಕ ವಾಟ್ಸ್‌ಅಪ್ ಮೂಲಕ ವಿಡಿಯೋ ವೈರಲ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು, ವಿಡಿಯೋ ವೈರಲ್ ಆಗುತ್ತಿದ್ದಂತೆ ಡಿವೈಎಸ್ಪಿ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ