AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಧ್ಯಪ್ರದೇಶದ ಮಕ್ಕಳು; ವೈರಲ್ ವಿಡಿಯೋಗೆ ಭಾರೀ ಆಕ್ರೋಶ

ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಧ್ಯಪ್ರದೇಶದ ಮಕ್ಕಳು; ವೈರಲ್ ವಿಡಿಯೋಗೆ ಭಾರೀ ಆಕ್ರೋಶ

ಸುಷ್ಮಾ ಚಕ್ರೆ
|

Updated on: Aug 04, 2026 | 5:41 PM

Share

ಮಧ್ಯಪ್ರದೇಶದ ಶಾಲಾ ವಿದ್ಯಾರ್ಥಿಗಳ ಗುಂಪೊಂದು ಶಾಲೆಗೆ ಹೋಗಲು ಬೆಟ್ವಾ ನದಿಯ ಡ್ಯಾಂನ ಸಣ್ಣ ತಡೆಗೋಡೆ ಮೇಲೆ ಅತ್ಯಂತ ಅಪಾಯಕಾರಿ ರೀತಿಯಲ್ಲಿ ನದಿ ದಾಟುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದರೂ ಮಕ್ಕಳು ಜಾಗರೂಕತೆಯಿಂದ ನದಿ ದಾಟುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಈ ಘಟನೆಯು ವಿದಿಶಾ ಜಿಲ್ಲೆಯ ಪಾಲೋಹ್ ಗ್ರಾಮದಲ್ಲಿ ನಡೆದಿದ್ದು, ಕರುವಾ ಗ್ರಾಮದ ಪಾಲೋಹ್‌ನಲ್ಲಿರುವ ಶಾಲೆಗೆ ತಲುಪಲು ಈ ಮಕ್ಕಳು ಪ್ರತಿದಿನವೂ ಈ ತಡೆಗೋಡೆಯನ್ನೇ ಹಾರಿ ಹೋಗುತ್ತಿದ್ದಾರೆ.

ನವದೆಹಲಿ, ಆಗಸ್ಟ್ 4: ಮಧ್ಯಪ್ರದೇಶದ ಶಾಲಾ ವಿದ್ಯಾರ್ಥಿಗಳ ಗುಂಪೊಂದು ಶಾಲೆಗೆ ಹೋಗಲು ಬೆಟ್ವಾ ನದಿಯ ಡ್ಯಾಂನ ಸಣ್ಣ ತಡೆಗೋಡೆ ಮೇಲೆ ಅತ್ಯಂತ ಅಪಾಯಕಾರಿ ರೀತಿಯಲ್ಲಿ ನದಿ ದಾಟುತ್ತಿರುವ ವಿಡಿಯೋ (Viral Video) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದರೂ ಮಕ್ಕಳು ಜಾಗರೂಕತೆಯಿಂದ ನದಿ ದಾಟುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಈ ಘಟನೆಯು ವಿದಿಶಾ ಜಿಲ್ಲೆಯ ಪಾಲೋಹ್ ಗ್ರಾಮದಲ್ಲಿ ನಡೆದಿದ್ದು, ಕರುವಾ ಗ್ರಾಮದ ಪಾಲೋಹ್‌ನಲ್ಲಿರುವ ಶಾಲೆಗೆ ತಲುಪಲು ಈ ಮಕ್ಕಳು ಪ್ರತಿದಿನವೂ ಈ ತಡೆಗೋಡೆಯನ್ನೇ ಹಾರಿ ಹೋಗುತ್ತಿದ್ದಾರೆ.

ಕಳೆದ ನಾಲ್ಕೈದು ವರ್ಷಗಳಿಂದ ಬೇರೆ ಸೂಕ್ತ ದಾರಿಯಿಲ್ಲದೆ ಇದೇ ರೀತಿ ಪ್ರಯಾಣಿಸುತ್ತಿರುವುದಾಗಿ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ. ಈ ವಿಡಿಯೋ ಶಾಲಾ ಮಕ್ಕಳ ಸುರಕ್ಷತೆ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸೂಕ್ತ ಮೂಲಸೌಕರ್ಯಗಳ ಕೊರತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More