ಕಲಬುರಗಿಯಲ್ಲಿ ಶರಣಬಸವೇಶ್ವರ ದೇವಸ್ಥಾನ ಸ್ವಚ್ಛಗೊಳಿಸಿದ ಮಧ್ಯಪ್ರದೇಶ ಮಾಜಿ ಸಿಎಂ
ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ನೀಡಿದ್ದಾರೆ. ಈ ವೇಳೆ ತಾವೇ ಸ್ವತಃ ದೇವಸ್ಥಾನದ ಆವರಣವನ್ನು ಶುಚಿಗೊಳಿಸಿದರು. ಇದಕ್ಕೆ ಕೇಂದ್ರ ಸಚಿವ ಭಗವಂತ ಖೂಬಾ ಸೇರಿದಂತೆ ಹಲವರು ಸಾಥ್ ನೀಡಿದರು.
ಕಲಬುರಗಿ, ಫೆ.21: ಶರಣಬಸವೇಶ್ವರ ದೇವಸ್ಥಾನಕ್ಕೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಭೇಟಿ ನೀಡಿದ್ದಾರೆ. ಕಲಬುರಗಿ(Kalaburagi)ಯಲ್ಲಿನ ಶರಣಬಸವೇಶ್ವರ ದೇವಸ್ಥಾನಕ್ಕೆ ಇಂದು(ಫೆ.21) ಆಗಮಿಸಿದ ಚೌಹಾಣ್, ದೇಗುಲ ಆವರಣವನ್ನು ತಾವೇ ಸ್ವತಃ ಸ್ವಚ್ಛಗೊಳಿಸಿದರು. ಈ ವೇಳೆ ಅವರಿಗೆ ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಉಮೇಶ್ ಜಾಧವ್ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರು ಸಾಥ್ ಕೊಟ್ಟಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos