ಕಲಬುರಗಿಯಲ್ಲಿ ಶರಣಬಸವೇಶ್ವರ ದೇವಸ್ಥಾನ ಸ್ವಚ್ಛಗೊಳಿಸಿದ ಮಧ್ಯಪ್ರದೇಶ ಮಾಜಿ ಸಿಎಂ

Edited By: ಕಿರಣ್ ಹನುಮಂತ್​ ಮಾದಾರ್

Updated on: Feb 21, 2024 | 5:06 PM

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌‌ ಭೇಟಿ ನೀಡಿದ್ದಾರೆ. ಈ ವೇಳೆ ತಾವೇ ಸ್ವತಃ ದೇವಸ್ಥಾನದ ಆವರಣವನ್ನು ಶುಚಿಗೊಳಿಸಿದರು. ಇದಕ್ಕೆ ಕೇಂದ್ರ ಸಚಿವ ಭಗವಂತ ಖೂಬಾ ಸೇರಿದಂತೆ ಹಲವರು ಸಾಥ್​ ನೀಡಿದರು.

ಕಲಬುರಗಿ, ಫೆ.21: ಶರಣಬಸವೇಶ್ವರ ದೇವಸ್ಥಾನಕ್ಕೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌‌ (Shivraj Singh Chouhan) ಭೇಟಿ ನೀಡಿದ್ದಾರೆ. ಕಲಬುರಗಿ(Kalaburagi)ಯಲ್ಲಿನ ಶರಣಬಸವೇಶ್ವರ ದೇವಸ್ಥಾನಕ್ಕೆ ಇಂದು(ಫೆ.21) ಆಗಮಿಸಿದ ಚೌಹಾಣ್,​ ದೇಗುಲ ಆವರಣವನ್ನು ತಾವೇ ಸ್ವತಃ ಸ್ವಚ್ಛಗೊಳಿಸಿದರು. ಈ ವೇಳೆ ಅವರಿಗೆ ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಉಮೇಶ್ ಜಾಧವ್ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರು ಸಾಥ್ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More