ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ಶಾಕಿಂಗ್ ವಿಡಿಯೋ ವೈರಲ್
ಮಧ್ಯಪ್ರದೇಶದ ಸತ್ನಾದಿಂದ ಮಹಿಳೆಯೊಬ್ಬರು ಕತ್ತು ಹಿಸುಕಿ ಥಳಿಸುತ್ತಿರುವ, ತನ್ನ ಗಂಡನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ತನ್ನ ಮೇಲೆ ನಡೆಯುತ್ತಿರುವ ಕೌಟುಂಬಿಕ ಹಿಂಸಾಚಾರವನ್ನು ರೆಕಾರ್ಡ್ ಮಾಡಿ ಸಹಾಯಕ್ಕಾಗಿ ಬೇಡಿಕೊಳ್ಳುತ್ತಿರುವ ಗಂಡನ ವೀಡಿಯೊವೊಂದು ಹೊರಬಿದ್ದಿದೆ. ಅಮ್ಮಾ, ಕಾಪಾಡಮ್ಮ ಎಂದು ಆತ ಸಹಾಯಕ್ಕಾಗಿ ಕಿರುಚಾಡುತ್ತಿರುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. ಅವರಿಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಇತ್ತೀಚೆಗೆ ಇಬ್ಬರ ನಡುವೆ ಜಗಳ ಹೆಚ್ಚಾಗುತ್ತಲೇ ಇತ್ತು.
ಸತ್ನಾ, ಮಾರ್ಚ್ 24: ಮಧ್ಯಪ್ರದೇಶದ ಸತ್ನಾದಲ್ಲಿ ನಡೆದ ಆಘಾತಕಾರಿ ಘಟನೆಯ ವೀಡಿಯೊವೊಂದು ಅಂತರ್ಜಾಲದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಒಬ್ಬ ಮಹಿಳೆ ತನ್ನ ಗಂಡನಿಗೆ ಮನಬಂದಂತೆ ಹೊಡೆಯುತ್ತಿದ್ದಾಳೆ. ಗಂಡನನ್ನು ರೂಂನಲ್ಲಿ ಲಾಕ್ ಮಾಡಿ, ಆತನ ಕತ್ತು ಹಿಸುಕಿ ಹೊಡೆಯುತ್ತಿರುವುದನ್ನು ಆಕೆಯ ಗಂಡನೇ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ. ಅಮ್ಮಾ, ಕಾಪಾಡಮ್ಮ ಎಂದು ಆತ ಸಹಾಯಕ್ಕಾಗಿ ಕಿರುಚಾಡುತ್ತಿರುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. ಅವರಿಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಇತ್ತೀಚೆಗೆ ಇಬ್ಬರ ನಡುವೆ ಜಗಳ ಹೆಚ್ಚಾಗುತ್ತಲೇ ಇತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Mar 24, 2025 10:30 PM
Latest Videos

