Video: ಕಂದಕಕ್ಕೆ ಉರುಳಿ ಬಿದ್ದ ಬಸ್, ಮೂವರು ಸಾವು, 30ಕ್ಕೂ ಅಧಿಕ ಜನರಿಗೆ ಗಾಯ

Updated on: Nov 04, 2025 | 8:26 AM

ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಪ್ರಯಾಣಿಕರ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿ, 38 ಜನರು ಗಾಯಗೊಂಡಿದ್ದಾರೆ. ಇಂದೋರ್ ಮತ್ತು ಮ್ಹೋವ್ ನಡುವಿನ ಸಿಮ್ರೋಲ್ ಭೇರು ಘಾಟ್‌ನಲ್ಲಿ ಈ ಘಟನೆ ಸಂಭವಿಸಿದೆ. ಜಿಲ್ಲಾಡಳಿತದ ಪ್ರಕಾರ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಇತರ ಒಂಬತ್ತು ಜನರನ್ನು ಇಂದೋರ್‌ನ ಎಂವೈ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಇಂದೋರ್, ನವೆಂಬರ್ 04: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಪ್ರಯಾಣಿಕರ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿ, 38 ಜನರು ಗಾಯಗೊಂಡಿದ್ದಾರೆ. ಇಂದೋರ್ ಮತ್ತು ಮ್ಹೋವ್ ನಡುವಿನ ಸಿಮ್ರೋಲ್ ಭೇರು ಘಾಟ್‌ನಲ್ಲಿ ಈ ಘಟನೆ ಸಂಭವಿಸಿದೆ. ಜಿಲ್ಲಾಡಳಿತದ ಪ್ರಕಾರ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಇತರ ಒಂಬತ್ತು ಜನರನ್ನು ಇಂದೋರ್‌ನ ಎಂವೈ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಓಂಕಾರೇಶ್ವರದಿಂದ ಇಂದೋರ್‌ಗೆ ತೆರಳುತ್ತಿದ್ದಾಗ ವಾಹನ ಅಪಘಾತಕ್ಕೀಡಾಗಿದೆ ಎಂದು ಜಿಲ್ಲಾಧಿಕಾರಿ ಶಿವಂ ವರ್ಮಾ ತಿಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ