ತಿರುವಿನಲ್ಲಿ ವೇಗವಾಗಿ ಬಂದ ಗೂಡ್ಸ್ ಆಟೋ ಜಸ್ಟ್ ಮಿಸ್!
ಮಡಿಕೇರಿ ಬಳಿಯ ಬೋಯಿಕೇರಿ ಬಳಿ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ರಸ್ತೆ ಅಪಘಾತವೊಂದು ಜಸ್ಟ್ ಮಿಸ್ ಆಗಿದ್ದು, ಭಾರೀ ಅನಾಹುತ ತಪ್ಪಿದೆ. ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಗೂಡ್ಸ್ ಆಟೋವೊಂದು ಅತಿ ವೇಗವಾಗಿ ಬಂದಿದೆ. ಈ ವೇಳೆ ಎದುರಿಗಿದ್ದ ಕಾರಿಗೆ ಅಪ್ಪಳಿಸುವುದನ್ನು ತಪ್ಪಿಸಲು ಆಟೋ ಚಾಲಕ ವಾಹನವನ್ನು ತಕ್ಷಣವೇ ಬಲಬದಿಗೆ ತಿರುಗಿಸಿದ್ದಾನೆ. ಅದೇ ಸಮಯದಲ್ಲಿ ಎದುರಿನಿಂದ ಬರುತ್ತಿದ್ದ ಸಾರಿಗೆ ಬಸ್‌ಗೆ ಆಟೋ ಡಿಕ್ಕಿಯಾಗುವ ಸಾಧ್ಯತೆ ಇತ್ತು. ಆದರೆ, ಕೆಎಸ್‌ಆರ್‌ಟಿಸಿ ಚಾಲಕ ತಕ್ಷಣವೇ ಬ್ರೇಕ್ ಹಾಕಿ ಬಸ್ ಪಕ್ಕಕ್ಕೆ ಸರಿಸಿದ್ದರಿಂದ ದೊಡ್ಡ ದುರಂತ ತಪ್ಪಿದೆ. ಈ ಇಡೀ ರೋಮಾಂಚನಕಾರಿ ಅಪಘಾತದ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕೊಡಗು, ಮೇ 31: ಮಡಿಕೇರಿ ಬಳಿಯ ಬೋಯಿಕೇರಿ ಬಳಿ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ರಸ್ತೆ ಅಪಘಾತವೊಂದು ಜಸ್ಟ್ ಮಿಸ್ ಆಗಿದ್ದು, ಭಾರೀ ಅನಾಹುತ ತಪ್ಪಿದೆ. ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಗೂಡ್ಸ್ ಆಟೋವೊಂದು ಅತಿ ವೇಗವಾಗಿ ಬಂದಿದೆ. ಈ ವೇಳೆ ಎದುರಿಗಿದ್ದ ಕಾರಿಗೆ ಅಪ್ಪಳಿಸುವುದನ್ನು ತಪ್ಪಿಸಲು ಆಟೋ ಚಾಲಕ ವಾಹನವನ್ನು ತಕ್ಷಣವೇ ಬಲಬದಿಗೆ ತಿರುಗಿಸಿದ್ದಾನೆ. ಅದೇ ಸಮಯದಲ್ಲಿ ಎದುರಿನಿಂದ ಬರುತ್ತಿದ್ದ ಸಾರಿಗೆ ಬಸ್‌ಗೆ ಆಟೋ ಡಿಕ್ಕಿಯಾಗುವ ಸಾಧ್ಯತೆ ಇತ್ತು. ಆದರೆ, ಕೆಎಸ್‌ಆರ್‌ಟಿಸಿ ಚಾಲಕ ತಕ್ಷಣವೇ ಬ್ರೇಕ್ ಹಾಕಿ ಬಸ್ ಪಕ್ಕಕ್ಕೆ ಸರಿಸಿದ್ದರಿಂದ ದೊಡ್ಡ ದುರಂತ ತಪ್ಪಿದೆ. ಈ ಇಡೀ ರೋಮಾಂಚನಕಾರಿ ಅಪಘಾತದ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published on: May 31, 2026 12:41 PM
Follow Us