ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!

Edited By:

Updated on: Apr 04, 2026 | 3:20 PM

ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದ ಭೀಕರ ಅಪಘಾತದಲ್ಲಿ, ಅತಿವೇಗದಿಂದ ಬಂದ ಪ್ರವಾಸಿ ಬಸ್ ರಸ್ತೆ ಬದಿಯಲ್ಲಿದ್ದ ಕಾರಿನ ಮೇಲೆ ಉರುಳಿದೆ. ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ್ಯವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬಸ್ ಚಾಲಕ ಸುದೀಪ್‌ನ ಅತಿವೇಗವೇ ಘಟನೆಗೆ ಕಾರಣ ಎನ್ನಲಾಗಿದ್ದು, ಬಸ್‌ನಲ್ಲಿದ್ದ ಹಲವು ಪ್ರವಾಸಿಗರಿಗೂ ಗಾಯಗಳಾಗಿವೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಕೊಡಗು, ಏಪ್ರಿಲ್​ 04: ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವಂತಹ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ‌ ಸುದೀಪ್​ ಅತಿ ವೇಗವಾಗಿ ಬಸ್ ಚಲಾಯಿಸಿದ್ದಾರೆ. ಈ ವೇಳೆ ರಸ್ತೆ‌ ಬದಿ‌ ನಿಂತಿದ್ದ ಕಾರಿನ‌ ಮೇಲೆ ಬಸ್ ಉರುಳಿ ಬಿದ್ದಿದೆ. ಸದ್ಯ ​​ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us