ಮಾಘ ಮಾಸ ಹುಣ್ಣಿಮೆ: ಟಿ ನರಸೀಪುರದ ಕಾವೇರಿ ನದಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತರ ದಂಡು

Edited By:

Updated on: Feb 01, 2026 | 10:29 AM

ಟಿ. ನರಸೀಪುರದ ಕಾವೇರಿ, ಕಬಿನಿ, ಕಪಿಲಾ ನದಿಗಳ ಸಂಗಮ ಸ್ಥಳ ತ್ರಿವೇಣಿ ಸಂಗಮದಲ್ಲಿ ಮಾಘ ಮಾಸ ಹುಣ್ಣಿಮೆಯಂದು ಪುಣ್ಯಸ್ನಾನಕ್ಕೆ ಭಕ್ತಸಾಗರ ಹರಿದುಬಂದಿದೆ. ಮಧ್ಯರಾತ್ರಿಯಿಂದಲೇ ಭಕ್ತರು ಪವಿತ್ರ ಸ್ನಾನ ಮಾಡಿ ಗುಂಜಾ ನರಸಿಂಹಸ್ವಾಮಿ ದರ್ಶನ ಪಡೆದರು. ಈ ಧಾರ್ಮಿಕ ಆಚರಣೆಗೆ ದೂರದ ಊರುಗಳಿಂದಲೂ ಭಕ್ತರು ಆಗಮಿಸಿದ್ದರು.

ಮೈಸೂರು, ಫೆಬ್ರವರಿ 1: ಟಿ. ನರಸೀಪುರದಲ್ಲಿರುವ ಪವಿತ್ರ ತ್ರಿವೇಣಿ ಸಂಗಮದಲ್ಲಿ ಮಾಘ ಮಾಸ ಹುಣ್ಣಿಮೆಯ ಪುಣ್ಯಸ್ನಾನಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ. ಕಾವೇರಿ, ಕಬಿನಿ ಮತ್ತು ಕಪಿಲಾ ನದಿಗಳು ಸೇರುವ ಈ ಸಂಗಮ ಸ್ಥಳದಲ್ಲಿ ಸ್ನಾನ ಮಾಡಿದರೆ ಪಾಪಗಳು ಕಳೆಯುತ್ತವೆ ಎಂಬ ನಂಬಿಕೆ ಭಕ್ತರಲ್ಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ, ಮಧ್ಯರಾತ್ರಿಯಿಂದಲೇ ಸಹಸ್ರಾರು ಭಕ್ತರು ಸಂಗಮ ಸ್ಥಳದಲ್ಲಿ ಪವಿತ್ರ ಸ್ನಾನ ಕೈಗೊಂಡರು.

ಪುಣ್ಯಸ್ನಾನದ ನಂತರ, ಭಕ್ತರು ಸಮೀಪದಲ್ಲಿರುವ ಐತಿಹಾಸಿಕ ಗುಂಜಾ ನರಸಿಂಹಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು. ಈ ಶುಭ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಕರ್ನಾಟಕದ ವಿವಿಧ ಭಾಗಗಳಿಂದ ಭಕ್ತರು ಟಿ. ನರಸೀಪುರಕ್ಕೆ ದಂಡು ಹರಿದುಬಂದಿತ್ತು. ನದಿತೀರದಲ್ಲಿ ಜನಜಂಗುಳಿ ನಿರ್ಮಾಣವಾಗಿತ್ತು. ಈ ಸಮೂಹ ಸ್ನಾನವು ಹಿಂದೂ ಧರ್ಮದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಪ್ರತಿಬಿಂಬಿಸುತ್ತದೆ.

 

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More