ಮಹಾಕುಂಭ ಮೇಳ ಕಾಲ್ತುಳಿತ, ಶೀಘ್ರ ಅಮೃತಸ್ನಾನಕ್ಕೆ ಮತ್ತೆ ಅವಕಾಶ: ಡಿಐಜಿ ವೈಭವ್ ಕೃಷ್ಣ

Updated on: Jan 29, 2025 | 12:48 PM

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಇಂದು ಕಾಲ್ತುಳಿದ ಸಂಭವಿಸಿದೆ. ಅನೇಕರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೌನಿ ಅಮಾವಾಸ್ಯೆ ಹಿನ್ನೆಲೆ ಇಂದು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಪುಣ್ಯ ಬರುತ್ತದೆ ಎಂಬುದು ಭಕ್ತರ ನಂಬಿಕೆ ಹಾಗಾಗಿ ನೂಕುನುಗ್ಗಲು ಉಂಟಾಗಿತ್ತು. ಹಾಗಾಗಿ ಸಂಗಮದಲ್ಲಿ ಅಮೃತಸ್ನಾನಕ್ಕೆ ನಿಷೇಧ ಹೇರಲಾಗಿತ್ತು. ಇದೀಗ ಶೀಘ್ರ ಮತ್ತೆ ಅವಕಾಶ ಕಲ್ಪಿಸುವುದಾಗಿ ಡಿಐಜಿ ವೈಭವ್ ಕೃಷ್ಣ ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಇಂದು ಕಾಲ್ತುಳಿದ ಸಂಭವಿಸಿದೆ. ಅನೇಕರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೌನಿ ಅಮಾವಾಸ್ಯೆ ಹಿನ್ನೆಲೆ ಇಂದು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಪುಣ್ಯ ಬರುತ್ತದೆ ಎಂಬುದು ಭಕ್ತರ ನಂಬಿಕೆ ಹಾಗಾಗಿ ನೂಕುನುಗ್ಗಲು ಉಂಟಾಗಿತ್ತು. ಹಾಗಾಗಿ ಸಂಗಮದಲ್ಲಿ ಅಮೃತಸ್ನಾನಕ್ಕೆ ನಿಷೇಧ ಹೇರಲಾಗಿತ್ತು. ಇದೀಗ ಶೀಘ್ರ ಮತ್ತೆ ಅವಕಾಶ ಕಲ್ಪಿಸುವುದಾಗಿ ಡಿಐಜಿ ವೈಭವ್ ಕೃಷ್ಣ ಹೇಳಿದ್ದಾರೆ. ಇಂದು 10 ಕೋಟಿ ಮಂದಿ ಆಗಮಿಸುವ ನಿರೀಕ್ಷೆ ಇದೆ. ಅಖಾಡ ಮಾರ್ಗ ಹಾಗೂ ಅಖಾಡ ಘಾಟ್ ರೆಡಿಯಾಗಿದೆ. ಎಲ್ಲವೂ ನಮ್ಮ ನಿಯಂತ್ರಣದಲ್ಲಿದೆ. ಕಾಲ್ತುಳಿತದಲ್ಲಿ ಎಷ್ಟು ಮಂದಿ ಗಾಯಗೊಂಡಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿ ನಮ್ಮ ಬಳಿ ಇಲ್ಲ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jan 29, 2025 12:47 PM
Loading...
Unable to load recommendations.
Follow Us