12 ವರ್ಷದ ಬಳಿಕ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ; ಇಲ್ಲಿದೆ ವಿಡಿಯೋ
ಜಗತ್ತಿನ ಏಕೈಕ ಮಂದಸ್ಮಿತ ಗೊಮ್ಮಟನಿಗೆ ಇಂದು(ಫೆ.22) ಮಹಾಮಸ್ತಾಕಾಭಿಷೇಕ ನಡೆಯುತ್ತಿದೆ. ಬೆಳ್ತಂಗಡಿ ತಾಲೂಕಿನ ವೇಣೂರಿನ ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ಅಧಿಕೃತ ಚಾಲನೆ ಸಿಕ್ಕಿದ್ದು, 12 ವರ್ಷದ ಬಳಿಕ ಕಲಶದ ಮೂಲಕ 35 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಐದು ಅಂತಸ್ತಿನ ಅಟ್ಟಳಿಗೆ ಹತ್ತಿ ಅಭಿಷೇಕ ಮಾಡುತ್ತಿದ್ದಾರೆ.
ಮಂಗಳೂರು, ಫೆ.22: ಜಗತ್ತಿನ ಏಕೈಕ ಮಂದಸ್ಮಿತ ಗೊಮ್ಮಟನಿಗೆ ಇಂದು(ಫೆ.22) ಮಹಾಮಸ್ತಾಕಾಭಿಷೇಕದ (Mahamastakabhisheka) ಸಂಭ್ರಮ ಮನೆಮಾಡಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನ ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ಅಧಿಕೃತ ಚಾಲನೆ ಸಿಕ್ಕಿದ್ದು, 12 ವರ್ಷದ ಬಳಿಕ ಕಲಶದ ಮೂಲಕ 35 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಐದು ಅಂತಸ್ತಿನ ಅಟ್ಟಳಿಗೆ ಹತ್ತಿ ಅಭಿಷೇಕ ಮಾಡುತ್ತಿದ್ದಾರೆ. ಇದನ್ನು ಕಣ್ತುಂಬಿಕೊಳ್ಳಲು ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದಾರೆ. ಇನ್ನು ಮಾರ್ಚ್ 1ರವರೆಗೂ ವಿವಿಧ ದ್ರವ್ಯಗಳಿಂದ ಬಾಹುಬಲಿ ಮೂರ್ತಿಗೆ ಅಭಿಷೇಕ ನಡೆಯಲಿದೆ.
35 ಅಡಿ ಎತ್ತರದ ಏಕಶಿಲಾ
ಇನ್ನು 35 ಅಡಿ ಎತ್ತರದ ಏಕಶಿಲಾ ರಚನೆಯ ಬಾಹುಬಲಿ ಮೂರ್ತಿ, ಫಲ್ಗುಣಿ ನದಿ ತೀರದ ಉತ್ತಾರಭಿಮುಖವಾಗಿ ನಿಂತಿದೆ. ಬಾಹುಬಲಿ ಮೂರ್ತಿ ಪ್ರತಿಷ್ಠಾಪಿಸಲ್ಪಟ್ಟ ಅಜಿಲ ವಂಶದ ಇಂದಿನ ಅರಸರಾದ ತಿಮ್ಮಣ್ಣರಸ ಡಾ. ಪದ್ಮಪ್ರಸಾದ್ ಅಜಿಲರು ಈ ಕ್ಷೇತ್ರದ ಎಲ್ಲ ಕೆಲಸ ಕಾರ್ಯಗಳಲ್ಲಿ ಸಕ್ರಿಯ ಮಾರ್ಗದರ್ಶನ ನೀಡುತ್ತ ಬಂದಿದ್ದು, ಅವರಿಗೆ ಪಟ್ಟಭಿಷೇಕವಾದ ಬಳಿಕ ಇದು ತೃತೀಯ ಮಹಾಮಸ್ತಕಾಭಿಷೇಕವಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ