AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಸಂಕಲ್ಪ ಮತ್ತು ನವಸಂಕಲ್ಪ, 2037ರ ಭವ್ಯ ಕನಸು:  ಡಿಕೆ ಶಿವಕುಮಾರ್ ಸಂಕಲ್ಪ

ಮಹಾಸಂಕಲ್ಪ ಮತ್ತು ನವಸಂಕಲ್ಪ, 2037ರ ಭವ್ಯ ಕನಸು: ಡಿಕೆ ಶಿವಕುಮಾರ್ ಸಂಕಲ್ಪ

ರಮೇಶ್ ಬಿ. ಜವಳಗೇರಾ
|

Updated on:Sep 10, 2026 | 4:44 PM

Share

ಡಿಕೆ ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಇಂದಿಗೆ (ಸೆಪ್ಟೆಂಬರ್ 10) 100 ದಿನಗಳು ಪೂರೈಸಿವೆ. ಹೀಗಾಗಿ ಈ ಶತಕದ ಸಂಭ್ರಮಕ್ಕಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ದೃಢ ಕರ್ನಾಟಕದ ಸಂಕಲ್ಪ ಎನ್ನುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಮಹತ್ವದ ವಿಚಾರಣಗಳನ್ಜು ಹಂಚಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳು ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಕಾರ್ಯಕ್ರಮಗಳನ್ನು ನೀಡುವ ಬಗ್ಗೆ ವಿವರಿಸಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 10): ಡಿಕೆ ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಇಂದಿಗೆ (ಸೆಪ್ಟೆಂಬರ್ 10) 100 ದಿನಗಳು ಪೂರೈಸಿವೆ. ಹೀಗಾಗಿ ಈ ಶತಕದ ಸಂಭ್ರಮಕ್ಕಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ದೃಢ ಕರ್ನಾಟಕದ ಸಂಕಲ್ಪ ಎನ್ನುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಮಹತ್ವದ ವಿಚಾರಣಗಳನ್ಜು ಹಂಚಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳು ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಕಾರ್ಯಕ್ರಮಗಳನ್ನು ನೀಡುವ ಬಗ್ಗೆ ವಿವರಿಸಿದ್ದಾರೆ.

2037ರ ವೇಳೆಗೆ ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ರೂಪಿಸುವುದು, ಬಡತನ ಮತ್ತು ಶಾಲೆಯಿಂದ ಹೊರಗುಳಿಯುವ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವುದು ಹಾಗೂ ಅಪೌಷ್ಟಿಕತೆಯನ್ನು 5% ಕ್ಕಿಂತ ಕಡಿಮೆ ಮಾಡುವುದು ಸರ್ಕಾರದ ಪ್ರಮುಖ ‘ಮಹಾಸಂಕಲ್ಪ’ವಾಗಿದೆ. ಇದಕ್ಕಾಗಿ ‘ನವಸಂಕಲ್ಪ’ದಡಿ ಆರೋಗ್ಯ, ಶಿಕ್ಷಣ ಹಾಗೂ ಮೇಕೆದಾಟು-ಎತ್ತಿನಹೊಳೆಯಂತಹ ಜಲ ಭದ್ರತಾ ಯೋಜನೆಗಳಿಗೆ ವೇಗ ನೀಡಲಾಗಿದೆ. ಮುಂಬರುವ 500 ದಿನಗಳಲ್ಲಿ ಮೂಲಸೌಕರ್ಯಕ್ಕಾಗಿ ₹1.5 ಲಕ್ಷ ಕೋಟಿ ಬಂಡವಾಳ ಹೂಡಿಕೆ ಹಾಗೂ ₹3 ಲಕ್ಷ ಕೋಟಿ ಹೊಸ ಹೂಡಿಕೆ ಆಕರ್ಷಿಸುವ ಗುರಿ ಹೊಂದಲಾಗಿದೆ. ಜೊತೆಗೆ, 5 ಹೊಸ ಮಹಾನಗರಗಳ ನಿರ್ಮಾಣ, 1 ಲಕ್ಷ ಸರ್ಕಾರಿ ಹಾಗೂ 5 ಲಕ್ಷ ಖಾಸಗಿ ಉದ್ಯೋಗ ಸೃಷ್ಟಿ, ನಿರಾಶ್ರಿತರಿಗೆ 5 ಲಕ್ಷ ನಿವೇಶನ ಹಂಚಿಕೆ ಮತ್ತು ಬೆಂಗಳೂರಿನಲ್ಲಿ 5 ಹೊಸ ಲಾಲ್‌ಬಾಗ್ ಮಾದರಿಯ ಉದ್ಯಾನವನಗಳು ಹಾಗೂ 7 ಕೆರೆಗಳ ಪುನರುಜ್ಜೀವನಕ್ಕೆ ದೃಢ ಹೆಜ್ಜೆ ಇಡಲಾಗಿದೆ. ​ಆರ್ಥಿಕವಾಗಿ ಸಬಲ, ಸಾಮಾಜಿಕವಾಗಿ ಸಮಾನ ಹಾಗೂ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ನಾಳಿನ ಭಾರತಕ್ಕೆ ಕರ್ನಾಟಕವನ್ನು ಮಾದರಿಯಾಗಿಸುವತ್ತ ಇದು ದಿಟ್ಟ ಹೆಜ್ಜೆಯಾಗಿದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 10, 2026 04:42 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More