ಮಹಾ ಶಿವರಾತ್ರಿ: ಗವಿಗಂಗಾಧರೇಶ್ವರ ಸ್ವಾಮಿಗೆ ವಿಶೇಷ ಅಭಿಷೇಕ
ಕರ್ನಾಟಕದಾದ್ಯಂತ ಮಹಾ ಶಿವರಾತ್ರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ರಾಜ್ಯದ ವಿವಿಧದ ಶಿವನ ದೇಗುಲಗಳಲ್ಲಿ ವಿಶೇಷ ಪೂಜೆ, ಅಭಿಷೇಕಗಳು ನೆರವೇರುತ್ತವೆ. ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಮುಂಜಾನೆಯಿಂದಲೇ ಸಂಭ್ರಮದ ವಾತಾವರಣ ಮನೆಮಾಡಿದೆ. ನೂರಾರು ಭಕ್ತರು ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ. ಶಿವಲಿಂಗಕ್ಕೆ ಅಭಿಷೇಕದ ವಿಡಿಯೋ ಇಲ್ಲಿದೆ.
ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಗವಿಗಂಗಾಧರೇಶ್ವರ ಸ್ವಾಮಿ ದೇಗುಲದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ, ಅಭಿಷೇಕ, ಅರ್ಚನಗಳು ನೆರವೇರುತ್ತಿವೆ. ಮುಂಜಾನೆಯಿಂದಲೇ ನೂರಾರು ಭಕ್ತರು ದೇಗುಲಕ್ಕೆ ಆಗಮಿಸಿ ಶಿವಲಿಂಗದ ದರ್ಶನ ಪಡೆಯುತ್ತಿದ್ದಾರೆ. ಬುಧವಾರ ಬೆಳಗ್ಗೆ ಗವಿಗಂಗಾಧರೇಶ್ವರ ಸ್ವಾಮಿಗೆ ಹಾಲು ಮತ್ತು ಬಿಲ್ವಪತ್ರೆಯಿಂದ ವಿಶೇಷವಾದ ಅಭಿಷೇಕ ಮತ್ತು ಅರ್ಚನ ನೆರವೇರಿಸಲಾಯಿತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ