ಮಹಾ ಶಿವರಾತ್ರಿ: ಚಿಕ್ಕೋಡಿಯಲ್ಲಿ ಹಣ್ಣುಗಳಿಂದಲೇ ಶಿವನಿಗೆ ವಿಶೇಷ ಅಲಂಕಾರ, ವಿಡಿಯೋ ನೋಡಿ

Edited By:

Updated on: Mar 08, 2024 | 9:46 PM

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಹಾದೇವ ಮಂದಿರದಲ್ಲಿ ಸಂಭ್ರಮದಿಂದ ಶಿವರಾತ್ರಿ ಆಚರಣೆ ಮಾಡಲಾಗಿದೆ. ಶಿವನ ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿಯೂ  ಹಣ್ಣುಗಳಿಂದಲೇ ಶಿವನ ಮೂರ್ತಿಯ ವಿಶೇಷ ಅಲಂಕಾರ ಮಾಡಲಾಗಿದ್ದು, ಭಕ್ತರ ಕಣ್ಮನ ಸೆಳೆಯಿತು. ಬೆಳಗ್ಗೆಯಿಂದಲೂ ನೂರಾರು ಭಕ್ತರು ಶಿವನ ದರ್ಶನ ಪಡೆದು ದರ್ಶನ ಪಡೆದುಕೊಂಡರು.

ಬೆಳಗಾವಿ, ಮಾರ್ಚ್​​ 08: ಇಂದು ನಾಡಿನೆಲ್ಲೆಡೆ ಶಿವರಾತ್ರಿ (Maha Shivratri) ಹಬ್ಬದ ಸಂಭ್ರಮ ಮನೆ ಮಾಡಿತ್ತು. ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಹಾದೇವ ಮಂದಿರದಲ್ಲಿ ಸಂಭ್ರಮದಿಂದ ಶಿವರಾತ್ರಿ ಆಚರಣೆ ಮಾಡಲಾಗಿದೆ. ಶಿವನ ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿಯೂ  ಹಣ್ಣುಗಳಿಂದಲೇ ಶಿವನ ಮೂರ್ತಿಯ ವಿಶೇಷ ಅಲಂಕಾರ ಮಾಡಲಾಗಿದ್ದು, ಭಕ್ತರ ಕಣ್ಮನ ಸೆಳೆಯಿತು. ಬೆಳಗ್ಗೆಯಿಂದಲೂ ನೂರಾರು ಭಕ್ತರು ಶಿವನ ದರ್ಶನ ಪಡೆದು ದರ್ಶನ ಪಡೆದು, ಭಕ್ತಿ ಭಾವ ಸಮರ್ಪಿಸಿದರು. ಆಯಾ ದೇವಸ್ಥಾನಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More