Mahakumbh 2025: ಮಹಾಕುಂಭದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಇಂದಿನಿಂದ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಮಹಾಕುಂಭಕ್ಕೆ ಚಾಲನೆ ಸಿಕ್ಕಿದೆ. ಇಂದಿನಿಂದ ಫೆಬ್ರವರಿ 26ರವರೆಗೆ ನಡೆಯುವ ಈ ಕುಂಭಮೇಳದಲ್ಲಿ ಮೊದಲ ದಿನವಾದ ಇಂದು 1 ಕೋಟಿ ಜನರು ತೀರ್ಥಸ್ನಾನ ಮಾಡಿದ್ದಾರೆ. ಮುಂದಿನ 45 ದಿನಗಳಲ್ಲಿ 40 ಕೋಟಿಗೂ ಹೆಚ್ಚು ಜನರು ಈ ಮಹಾಕುಂಭದಲ್ಲಿ ಸೇರುವ ನಿರೀಕ್ಷೆಯಿದೆ. ಹರಿದ್ವಾರ, ಪ್ರಯಾಗರಾಜ್, ಉಜ್ಜಯಿನಿ ಮತ್ತು ನಾಸಿಕ್‌ಗಳಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಕುಂಭಮೇಳವನ್ನು ಆಯೋಜಿಸಲಾಗುತ್ತದೆ. ಇವುಗಳಲ್ಲಿ ಪ್ರಯಾಗರಾಜ್‌ನಲ್ಲಿ ನಡೆಯುವ ಮಹಾ ಕುಂಭ ಮೇಳ ಅತ್ಯಂತ ವಿಶೇಷವಾಗಿರುತ್ತದೆ.
ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ 45 ದಿನಗಳ ಕಾಲ ನಡೆಯುವ ಮಹಾಕುಂಭ ಮೇಳಕ್ಕೆ ಇಂದು ಚಾಲನೆ ಸಿಕ್ಕಿದೆ. ಮೊದಲ ದಿನವಾದ ಇಂದು 1 ಕೋಟಿ ಭಕ್ತರು ತೀರ್ಥ ಸ್ನಾನ ಮಾಡಿದ್ದಾರೆ. ಈ ಮಹಾಕುಂಭದಲ್ಲಿ 40 ಕೋಟಿಗೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ತ್ರಿವೇಣಿ ಸಂಗಮದಲ್ಲಿ ಭಕ್ತರ ದಟ್ಟಣೆ ಮುಂದುವರೆದಿದೆ. ಈ ಪ್ರದೇಶದಲ್ಲಿ ಡ್ರೋನ್ ಕಣ್ಗಾವಲು ಸಹ ಮಾಡಲಾಗುತ್ತಿದೆ. ಭದ್ರತೆಗಾಗಿ ನೀರೊಳಗಿನ ಡ್ರೋನ್‌ಗಳನ್ನು ಸಹ ಬಳಸಲಾಗಿದೆ. ಹರಿದ್ವಾರ, ಪ್ರಯಾಗರಾಜ್, ಉಜ್ಜಯಿನಿ ಮತ್ತು ನಾಸಿಕ್‌ಗಳಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಕುಂಭಮೇಳವನ್ನು ಆಯೋಜಿಸಲಾಗುತ್ತದೆ. ಇವುಗಳಲ್ಲಿ ಪ್ರಯಾಗರಾಜ್‌ನಲ್ಲಿ ನಡೆಯುವ ಮಹಾ ಕುಂಭ ಮೇಳ ಅತ್ಯಂತ ವಿಶೇಷವಾಗಿರುತ್ತದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ