ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ

Updated on: Jan 14, 2025 | 4:09 PM

ಮಕರ ಸಂಕ್ರಾಂತಿಯಂದು ಮಹಾಕುಂಭದಲ್ಲಿ 2 ಕೋಟಿಗಿಂತಲೂ ಹೆಚ್ಚು ಜನರು ತೀರ್ಥ ಸ್ನಾನ ಮಾಡಿದ್ದಾರೆ ಎಂದು ಯುಪಿ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ. ಮಹಾಕುಂಭದ 2ನೇ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ 2.5 ಕೋಟಿಗಿಂತ ಹೆಚ್ಚು ಜನರು ಪವಿತ್ರ ಸ್ನಾನ ಮಾಡಿದ್ದಾರೆ. ಈ ಮಹಾ ಕುಂಭಮೇಳವು 144 ವರ್ಷಗಳ ನಂತರ ಸಂಭವಿಸುತ್ತಿದೆ.

ಪ್ರಯಾಗರಾಜ್: ಪೌಷ ಪೂರ್ಣಿಮೆಯಂದು ಭಜನೆಗಳು ಮತ್ತು ಘೋಷಣೆಗಳೊಂದಿಗೆ ಪ್ರಯಾಗ್‌ರಾಜ್‌ನಲ್ಲಿ ಪ್ರಾರಂಭವಾದ ಮಹಾಕುಂಭ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಸಂಕ್ರಾಂತಿಯಾದ ಇಂದು ಮಹಾಕುಂಭ ರಾಜ ಸ್ನಾನಕ್ಕೆ ಸಾಕ್ಷಿಯಾಗಿದೆ. ಈ ಮಹಾ ಕುಂಭಮೇಳವು 144 ವರ್ಷಗಳ ನಂತರ ಸಂಭವಿಸುತ್ತಿದೆ. ಈ ಬಾರಿಯ ಮಹಾ ಕುಂಭ ಮೇಳವು ಇನ್ನಷ್ಟು ಶುಭಕರವಾಗಿದೆ ಎಂದು ಋಷಿಗಳು ಹೇಳಿಕೊಳ್ಳುತ್ತಾರೆ. ವಿಶ್ವದ ಅತಿದೊಡ್ಡ ಧಾರ್ಮಿಕ ಕೂಟಗಳಲ್ಲಿ ಒಂದಾದ ಕುಂಭಮೇಳವು ಕೋಟ್ಯಂತರ ಯಾತ್ರಿಕರನ್ನು ಆಕರ್ಷಿಸುತ್ತಲೇ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 14, 2025 04:08 PM
Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More