ಮಹಾಕುಂಭದಲ್ಲಿ ಪಾಲ್ಗೊಂಡ ಅಂಬಾನಿಯ 4 ಪೀಳಿಗೆ; ಪ್ರಯಾಗ್​ರಾಜ್​ನಲ್ಲಿ ಮುಖೇಶ್ ಅಂಬಾನಿ ಕುಟುಂಬ

Updated on: Feb 11, 2025 | 6:07 PM

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಇಂದು ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ, ಅವರ ತಾಯಿ ಕೋಕಿಲಾಬೆನ್ ಮತ್ತು ಪುತ್ರರಾದ ಅನಂತ್ ಮತ್ತು ಆಕಾಶ್, ಹಾಗೂ ಮೊಮ್ಮಕ್ಕಳು ಕೂಡ ಆಗಮಿಸಿದ್ದಾರೆ. ಈ ಮೂಲಕ ಅಂಬಾನಿ ಕುಟುಂಬದ 4 ತಲೆಮಾರಿನವರು ಮಹಾಕುಂಭದಲ್ಲಿ ಪವಿತ್ರಸ್ನಾನ ಮಾಡಿದ್ದಾರೆ.

ಪ್ರಯಾಗರಾಜ್: ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳಲು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ತಮ್ಮ ಕುಟುಂಬದೊಂದಿಗೆ ಪ್ರಯಾಗ್‌ರಾಜ್‌ನ ಅರೈಲ್ ಘಾಟ್‌ಗೆ ಆಗಮಿಸಿದ್ದಾರೆ. ಮುಖೇಶ್ ಅಂಬಾನಿ ಅವರ ತಾಯಿ ಕೋಕಿಲಾಬೆನ್ ಅಂಬಾನಿ ಕೂಡ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭದಲ್ಲಿ ಭಾಗವಹಿಸಲು ತ್ರಿವೇಣಿ ಸಂಗಮಕ್ಕೆ ಆಗಮಿಸಿದ್ದಾರೆ. ಮುಖೇಶ್ ಅಂಬಾನಿ ತಮ್ಮ ತಾಯಿ, ಪತ್ನಿ, ಮಕ್ಕಳು, ಸೊಸೆಯಂದಿರುವ, ಮೊಮ್ಮಕ್ಕಳ ಜೊತೆ ಮಹಾಕುಂಭಕ್ಕೆ ಆಗಮಿಸಿದ್ದಾರೆ. ಈ ಮೂಲಕ ಅಂಬಾನಿ ಕುಟುಂಬದ 4 ಪೀಳಿಗೆ ಮಹಾಕುಂಭದಲ್ಲಿ ಪವಿತ್ರಸ್ನಾನ ಮಾಡಿದೆ.

ಮುಖೇಶ್ ಅಂಬಾನಿ ಅವರ ಪುತ್ರರಾದ ಅನಂತ್ ಮತ್ತು ಆಕಾಶ್ ಅಂಬಾನಿ, ಆಕಾಶ್ ಅವರ ಪತ್ನಿ ಶ್ಲೋಕಾ ಮೆಹ್ತಾ ಮತ್ತು ಅವರ ಇಬ್ಬರು ಮಕ್ಕಳಾದ ಪೃಥ್ವಿ ಮತ್ತು ವೇದಾ ಅವರೊಂದಿಗೆ ಬಿಗಿ ಭದ್ರತೆಯ ನಡುವೆ ಅರೈಲ್ ಘಾಟ್‌ನಲ್ಲಿ ದೋಣಿಯತ್ತ ನಡೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಕೋಕಿಲಾಬೆನ್ ಅಂಬಾನಿ ತಮ್ಮ ಇಬ್ಬರು ಹೆಣ್ಣುಮಕ್ಕಳೊಂದಿಗೆ ಆಗಮಿಸಿದ್ದಾರೆ. ಕಳೆದ ತಿಂಗಳು, ಮುಖೇಶ್ ಅಂಬಾನಿಯವರ ಕಿರಿಯ ಸಹೋದರ ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಮತ್ತು ಅವರ ಪತ್ನಿ, ಮಾಜಿ ನಟ ಟೀನಾ ಅಂಬಾನಿ, ಮಹಾ ಕುಂಭ ಉತ್ಸವಕ್ಕಾಗಿ ಪ್ರಯಾಗರಾಜ್‌ಗೆ ಭೇಟಿ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More