ಮಹಾಕುಂಭ ಮೇಳ, ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್​ಗೆ ಬೆಂಕಿ

ಮಹಾಕುಂಭ ಮೇಳ, ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್​ಗೆ ಬೆಂಕಿ

ನಯನಾ ರಾಜೀವ್
|

Updated on:Jan 29, 2025 | 10:27 AM

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಮಹಾಕುಂಭ ಮೇಳೆ ನಡೆಯುತ್ತಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದ್ದು, ಗಾಯಗೊಂಡವರನ್ನು ಕರೆದೊಯ್ಯುವಾಗ ಆಂಬ್ಯುಲೆನ್ಸ್​ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ವರದಿಯಾಗಿದೆ. ತ್ರಿವೇಣಿ ಸಂಗಮಕ್ಕೆ ಹೋಗುವ ಮತ್ತು ಹೊರಡುವ ಮಾರ್ಗಗಳನ್ನು ಪ್ರತ್ಯೇಕಿಸಲಾಗಿಲ್ಲ ಎಂಬುದು ಮುಖ್ಯ ವಿಷಯವಾಗಿದೆ

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಮಹಾಕುಂಭ ಮೇಳೆ ನಡೆಯುತ್ತಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದ್ದು, ಗಾಯಗೊಂಡವರನ್ನು ಕರೆದೊಯ್ಯುವಾಗ ಆಂಬ್ಯುಲೆನ್ಸ್​ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ವರದಿಯಾಗಿದೆ. ತ್ರಿವೇಣಿ ಸಂಗಮಕ್ಕೆ ಹೋಗುವ ಮತ್ತು ಹೊರಡುವ ಮಾರ್ಗಗಳನ್ನು ಪ್ರತ್ಯೇಕಿಸಲಾಗಿಲ್ಲ ಎಂಬುದು ಮುಖ್ಯ ವಿಷಯವಾಗಿದೆ.

ಹಾಗಾಗಿ ಮೌನಿ ಅಮಾವಾಸ್ಯೆಯ ಅಮೃತ ಸ್ನಾನಕ್ಕೆಂದು ಹೋಗುವವರು ಪರಸ್ಪರ ತಳ್ಳಲ್ಪಟ್ಟಿದ್ದಾರೆ. ತಕ್ಷಣವೇ ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ಕರೆಸಲಾಯಿತು ಮತ್ತು ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು.

ಕುಂಭ ಮೈದಾನದಲ್ಲಿ ಸುಮಾರು 25-30 ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್​ನಲ್ಲಿ ಬೆಂಕಿ ಕಾಣಿಸಿಕೊಂಡು ರೋಗಿಗಳನ್ನು ಕೆಳಗಿಳಿಸಲಾಯಿತು. ಇಂದು ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಊಹಾಪೋಹಗಳು ಎದ್ದಿವೆ ಆದರೆ ಅಧಿಕೃತವಾಗಿ ಮಾಹಿತಿ ಲಭ್ಯವಾಗಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jan 29, 2025 10:26 AM