Video: ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್ನಲ್ಲಿ ಅಗ್ನಿ ಅವಘಡ
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ ಸಂಭವಿಸಿದೆ. ಹರಿಹರಾನಂದ ಸ್ವಾಮೀಜಿ ಉಳಿದುಕೊಂಡಿದ್ದ ಟೆಂಟ್ನಲ್ಲಿ ಬೆಂಕಿ ಆವರಿಸಿಕೊಂಡಿತ್ತು. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸಪಟ್ಟರು. ಸಂಭವಿಸಿದ ಬೆಂಕಿ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಓಲ್ಡ್ ಜಿಟಿ ರಸ್ತೆಯ ತುಳಸಿ ಛೇದಕ ಬಳಿಯ ಶಿಬಿರದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಖಾಕ್ ಚೌಕ್ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್‌ಪೆಕ್ಟರ್ ಯೋಗೇಶ್ ಚತುರ್ವೇದಿ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ ಸಂಭವಿಸಿದೆ. ಹರಿಹರಾನಂದ ಸ್ವಾಮೀಜಿ ಉಳಿದುಕೊಂಡಿದ್ದ ಟೆಂಟ್ನಲ್ಲಿ ಬೆಂಕಿ ಆವರಿಸಿಕೊಂಡಿತ್ತು. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸಪಟ್ಟರು. ಸಂಭವಿಸಿದ ಬೆಂಕಿ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಓಲ್ಡ್ ಜಿಟಿ ರಸ್ತೆಯ ತುಳಸಿ ಛೇದಕ ಬಳಿಯ ಶಿಬಿರದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಖಾಕ್ ಚೌಕ್ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್‌ಪೆಕ್ಟರ್ ಯೋಗೇಶ್ ಚತುರ್ವೇದಿ ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಕೂಡ ಸ್ಥಳಕ್ಕೆ ತಲುಪಿದ್ದಾರೆ ಎಂದು ಅವರು ಹೇಳಿದರು. ಬೆಂಕಿಗೆ ಕಾರಣವೇನೆಂಬುದರ ಕುರಿತು ತನಿಖೆ ನಡೆಯುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಎರಡು ಬಾರಿ ಅಗ್ನಿ ಅವಘಡ ಸಂಭವಿಸಿತ್ತು. ಅದಕ್ಕೂ ಮುನ್ನ ಕಾಲ್ತುಳಿತ ಸಂಭವಿಸಿ 40ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ