Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಮಹಾಕುಂಭದಿಂದ ಹಿಂದಿರುಗುವಾಗ ಅಪಘಾತ, 7 ಮಂದಿ ಸಾವು

Madhya Pradesh: ಮಹಾಕುಂಭದಿಂದ ಹಿಂದಿರುಗುವಾಗ ಅಪಘಾತ, 7 ಮಂದಿ ಸಾವು

ನಯನಾ ರಾಜೀವ್
|

Updated on: Feb 11, 2025 | 11:32 AM

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ, ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಹೆದ್ದಾರಿಯಲ್ಲಿ ಮಂಗಳವಾರ ಟೆಂಪೋ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸಾವನ್ನಪ್ಪಿದ್ದಾರೆ. ಸಿಹೋರಾದ ರಾಷ್ಟ್ರೀಯ ಹೆದ್ದಾರಿ-30 ರಲ್ಲಿ ಮೊಹ್ಲಾ ಬರ್ಗಿ ಬಳಿ ಈ ಅಪಘಾತ ಸಂಭವಿಸಿದ್ದು, ಸಾವನ್ನಪ್ಪಿದವರು ಆಂಧ್ರಪ್ರದೇಶಕ್ಕೆ ಸೇರಿದವರು. ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.

ಗಂಗಾ, ಯಮುನಾ ಮತ್ತು ಅತೀಂದ್ರಿಯ ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದಲ್ಲಿ ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿ ಭಕ್ತರು ಹಿಂತಿರುಗುತ್ತಿದ್ದರು. ಅಪಘಾತದ ನಂತರ ಜಬಲ್ಪುರದ ಕಲೆಕ್ಟರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸ್ಥಳಕ್ಕೆ ಧಾವಿಸಿದರು. ಮಹಾ ಕುಂಭಮೇಳಕ್ಕೆ ಬರುವ ಭಕ್ತರಿಗೆ ಅಪಘಾತಗಳು ಸಂಭವಿಸುತ್ತಿರುವುದು ಇದೇ ಮೊದಲಲ್ಲ.

ಸೋಮವಾರ, ಮಹಾಕುಂಭದಿಂದ ಹಿಂದಿರುಗುತ್ತಿದ್ದಾಗ ಆಗ್ರಾದ ದಂಪತಿಗಳಿದ್ದ ಕಾರು ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು. ಸೋಮವಾರ ಉತ್ತರ ಪ್ರದೇಶದ ಸೋನಭದ್ರದಲ್ಲಿ ಮಹಾ ಕುಂಭಮೇಳದಿಂದ ಮನೆಗೆ ಹೋಗುತ್ತಿದ್ದ ಕಾರು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಡಿಶಾದ ರೂರ್ಕೆಲಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇತರ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾ ಕುಂಭ ಮೇಳವು ಜನವರಿ 13 ರಂದು ಪ್ರಾರಂಭವಾಯಿತು. ಇದು ಫೆಬ್ರವರಿ 26 ರವರೆಗೆ ನಡೆಯಲಿದೆ. ಉತ್ತರ ಪ್ರದೇಶ ಸರ್ಕಾರದ ಅಂಕಿಅಂಶಗಳ ಪ್ರಕಾರ, ಫೆಬ್ರವರಿ 9 ರವರೆಗೆ 44 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ