Maharaja Trophy 2024: 3ನೇ ಪಂದ್ಯದಲ್ಲಿ ಲಯ ಕಂಡುಕೊಂಡ ಸಮಿತ್ ದ್ರಾವಿಡ್; ವಿಡಿಯೋ

|

Updated on: Aug 18, 2024 | 9:09 PM

Maharaja Trophy 2024: ಆಡಿದ ಮೊದಲೆರಡು ಪಂದ್ಯಗಳಲ್ಲಿ ಕೇವಲ ಒಂದಂಕಿಗೆ ಸುಸ್ತಾಗಿದ್ದ ಸಮಿತ್, ಮೂರನೇ ಪಂದ್ಯದಲ್ಲಿ ಲಯ ಕಂಡುಕೊಂಡಿದ್ದಾರೆ. ಇದರ ಜೊತೆಗೆ ಮೈಸೂರು ವಾರಿಯರ್ಸ್ ತಂಡಕ್ಕೆ 33 ರನ್​ಗಳ ಅಮೋಘ ಕೊಡುಗೆ ನೀಡಿದ್ದಾರೆ. ಈ ಪಂದ್ಯದಲ್ಲಿ 137 ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಸಮಿತ್ ದ್ರಾವಿಡ್, 24 ಎಸೆತಗಳಲ್ಲಿ 33 ರನ್ ಗಳಿಸಿದರು. ಈ ವೇಳೆ ಅವರ ಬ್ಯಾಟ್‌ನಿಂದ 4 ಬೌಂಡರಿ ಹಾಗೂ 1 ಸಿಕ್ಸರ್‌ ಕೂಡ ಸಿಡಿದವು.

ಟೀಂ ಇಂಡಿಯಾದ ಮಾಜಿ ನಾಯಕ ಮತ್ತು ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಮಹಾರಾಜ ಟ್ರೋಫಿ ಟಿ20 ಲೀಗ್​ನಲ್ಲಿ ಮೈಸೂರು ವಾರಿಯರ್ಸ್ ತಂಡದ ಪರ ಕಣಕ್ಕಿಳಿಯುತ್ತಿದ್ದಾರೆ. ಇದೇ ಮೊದಲ ಬಾರಿಗೆ ಈ ಟೂರ್ನಿಯಲ್ಲಿ ಆಡುತ್ತಿರುವ ಸಮಿತ್​ಗೆ ಉತ್ತಮ ಆರಂಭ ಧಕ್ಕಿರಲಿಲ್ಲ. ಆಡಿದ ಮೊದಲೆರಡು ಪಂದ್ಯಗಳಲ್ಲಿ ಕೇವಲ ಒಂದಂಕಿಗೆ ಸುಸ್ತಾಗಿದ್ದ ಸಮಿತ್, ಮೂರನೇ ಪಂದ್ಯದಲ್ಲಿ ಲಯ ಕಂಡುಕೊಂಡಿದ್ದಾರೆ. ಇದರ ಜೊತೆಗೆ ಮೈಸೂರು ವಾರಿಯರ್ಸ್ ತಂಡಕ್ಕೆ 33 ರನ್​ಗಳ ಅಮೋಘ ಕೊಡುಗೆ ನೀಡಿದ್ದಾರೆ. ಈ ಪಂದ್ಯದಲ್ಲಿ 137 ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಸಮಿತ್ ದ್ರಾವಿಡ್, 24 ಎಸೆತಗಳಲ್ಲಿ 33 ರನ್ ಗಳಿಸಿದರು. ಈ ವೇಳೆ ಅವರ ಬ್ಯಾಟ್‌ನಿಂದ 4 ಬೌಂಡರಿ ಹಾಗೂ 1 ಸಿಕ್ಸರ್‌ ಕೂಡ ಸಿಡಿದವು.

ಅದ್ಭುತ ಸಿಕ್ಸರ್ ಬಾರಿಸಿದ ಸಮಿತ್ ದ್ರಾವಿಡ್

ಆಡಿದ ಮೊದಲೆರಡು ಪಂದ್ಯಗಳಲ್ಲಿ ತಲಾ ಒಂದೊಂದು ಸಿಕ್ಸರ್ ಹಾಗೂ ಬೌಂಡರಿ ಬಾರಿಸಿ ಇನ್ನಿಂಗ್ಸ್ ಮುಗಿಸಿದ್ದ ಸಮಿತ್, ಈ ಪಂದ್ಯದಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್‌ ಬಾರಿಸಿದರು. ಇದರಲ್ಲಿ ಸಮಿತ್ ಬಾರಿಸಿದ ಗಗನಚುಂಬಿ ಸಿಕ್ಸರ್ ಅವರ ಇನ್ನಿಂಗ್ಸ್​ನ ಹೈಲೇಟ್ ಆಗಿತ್ತು. ಇನ್ನಿಂಗ್ಸ್​ನ10 ನೇ ಓವರ್‌ ಬೌಲ್ ಮಾಡಿದ ಲೆಗ್ ಸ್ಪಿನ್ನರ್ ಪ್ರವೀಣ್ ದುಬೆ ಅವರ ಎರಡನೇ ಎಸೆತವನ್ನು ಸಮಿತ್, ಡೀಪ್-ಕವರ್ ಕಡೆ ಅದ್ಭುತ ಸಿಕ್ಸರ್ ಬಾರಿಸಿದರು. ಈಗ ಅದರ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಆದರೆ ಈ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡ 196 ರನ್​ಗಳ ಬೃಹತ್ ಮೊತ್ತ ಕಲೆಹಾಕಿಯೂ ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ 3 ವಿಕೆಟ್‌ಗಳಿಂದ ಸೋಲನುಭವಿಸಬೇಕಾಯಿತು.