ಮನೀಶ್ ಪಾಂಡೆ ಮಿಂಚಿಂಗ್: ಮೈಸೂರು ವಾರಿಯರ್ಸ್ಗೆ ಭರ್ಜರಿ ಜಯ
Bengaluru Blasters vs Mysore Warriors: 181 ರನ್ಗಳ ಗುರಿ ಬೆನ್ನತ್ತಿದ ಬೆಂಗಳೂರು ಬ್ಲಾಸ್ಟರ್ಸ್ ಪರ ನಾಯಕ ಮಯಾಂಕ್ ಅಗರ್ವಾಲ್ 49 ಎಸೆತಗಳಲ್ಲಿ 66 ರನ್ ಬಾರಿಸಿದರೂ, ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಬೆಂಗಳೂರು ಬ್ಲಾಸ್ಟರ್ಸ್ ತಂಡವು 19.2 ಓವರ್ಗಳಲ್ಲಿ 141 ರನ್ಗಳಿಸಿ ಆಲೌಟ್ ಆಯಿತು. ಈ ಮೂಲಕ ಮೈಸೂರು ವಾರಿಯರ್ಸ್ ತಂಡವು 39 ರನ್ಗಳ ಜಯ ಸಾಧಿಸಿದೆ.
ಮಹಾರಾಜ ಟೂರ್ನಿಯ 2ನೇ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಮೈಸೂರು ವಾರಿಯರ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಮೈಸೂರಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಮನೀಶ್ ಪಾಂಡೆ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ವಾರಿಯರ್ಸ್ ಪಡೆಯು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.
ಆರಂಭಿಕರಾಗಿ ಕಣಕ್ಕಿಳಿದ ಅಜಿತ್ ಕಾರ್ತಿಕ್ (13) ಹಾಗೂ ಕಾರ್ತಿಕ್ ಎಸ್ (3) ಬೇಗನೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ವೆಂಕಟೇಶ್ 12 ರನ್ಗಳಿಸಲಷ್ಟೇ ಶಕ್ತರಾದರು. ಈ ಹಂತದಲ್ಲಿ ಜೊತೆಗೂಡಿದ ಹರ್ಷಿಲ್ ಹಾಗೂ ಮನೀಶ್ ಪಾಂಡೆ ಮೈಸೂರು ವಾರಿಯರ್ಸ್ ತಂಡಕ್ಕೆ ಆಸರೆಯಾಗಿ ನಿಂತರು. ಇದರ ನಡುವೆ ಹರ್ಷಿಲ್ 31 ಎಸೆತಗಳಲ್ಲಿ 38 ರನ್ಗಳಿಸಿ ಔಟಾದರು.
ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಮನೀಶ್ ಪಾಂಡೆ 29 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 58 ರನ್ ಬಾರಿಸಿದರು. ಇನ್ನು ಪಾಂಡೆಗೆ ಉತ್ತಮ ಸಾಥ್ ನೀಡಿದ ವಿಕೆಟ್ ಕೀಪರ್ ಬ್ಯಾಟರ್ ಸುಮಿತ್ ಕುಮಾರ್ 28 ಎಸೆತಗಳಲ್ಲಿ 44 ರನ್ ಗಳಿಸಿದರು. ಈ ಮೂಲಕ ಮೈಸೂರು ವಾರಿಯರ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿತು.
181 ರನ್ಗಳ ಗುರಿ ಬೆನ್ನತ್ತಿದ ಬೆಂಗಳೂರು ಬ್ಲಾಸ್ಟರ್ಸ್ ಪರ ನಾಯಕ ಮಯಾಂಕ್ ಅಗರ್ವಾಲ್ 49 ಎಸೆತಗಳಲ್ಲಿ 66 ರನ್ ಬಾರಿಸಿದರೂ, ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಬೆಂಗಳೂರು ಬ್ಲಾಸ್ಟರ್ಸ್ ತಂಡವು 19.2 ಓವರ್ಗಳಲ್ಲಿ 141 ರನ್ಗಳಿಸಿ ಆಲೌಟ್ ಆಯಿತು. ಈ ಮೂಲಕ ಮೈಸೂರು ವಾರಿಯರ್ಸ್ ತಂಡವು 39 ರನ್ಗಳ ಜಯ ಸಾಧಿಸಿದೆ.
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

