ವಾಟ್ ಎ ಶಾಟ್ ಸಮಿತ್..! ದ್ರಾವಿಡ್ ಪುತ್ರ ಸಿಡಿಸಿದ ಫೈನ್ ಲೆಗ್ ಸಿಕ್ಸರ್ ನೋಡಿ
Maharaja Trophy 2024 Samit Dravid: ನಾಯಕ ಕರುಣ್ ನಾಯರ್ಗೆ ಉತ್ತಮ ಸಾಥ್ ನೀಡುತ್ತಿದ್ದ ಸಮಿತ್ ಬೌಲ್ಡ್ ಆಗುವ ಮೂಲಕ ತಮ್ಮ ವಿಕೆಟ್ ಒಪ್ಪಿಸಿದರು. ಆದಾಗ್ಯೂ ಸಮಿತ್ ತಮ್ಮ ಇನ್ನಿಂಗ್ಸ್ನಲ್ಲಿ 12 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 16 ರನ್ ಸಿಡಿಸಿದರು. ಅದರಲ್ಲೂ ಸಮಿತ್ ಸಿಡಿಸಿದ ಏಕೈಕ ಸಿಕ್ಸರ್ ಮೈದಾನದಲ್ಲಿ ನೆರೆದಿದ್ದವರನ್ನು ರೋಮಾಂಚನಗೊಳಿಸಿತು.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೈಸೂರು ವಾರಿಯರ್ಸ್ ಹಾಗೂ ಮಂಗಳೂರು ಡ್ರ್ಯಾಗನ್ಸ್ ನಡುವಿನ ಪಂದ್ಯದಲ್ಲಿ ಬಿಗ್ ಇನ್ನಿಂಗ್ಸ್ ಆಡುವಲ್ಲಿ ಮತ್ತೊಮ್ಮೆ ವಿಫಲರಾದ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಕೇವಲ 16 ರನ್ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ನಾಯಕ ಕರುಣ್ ನಾಯರ್ಗೆ ಉತ್ತಮ ಸಾಥ್ ನೀಡುತ್ತಿದ್ದ ಸಮಿತ್ ಬೌಲ್ಡ್ ಆಗುವ ಮೂಲಕ ತಮ್ಮ ವಿಕೆಟ್ ಒಪ್ಪಿಸಿದರು. ಆದಾಗ್ಯೂ ಸಮಿತ್ ತಮ್ಮ ಇನ್ನಿಂಗ್ಸ್ನಲ್ಲಿ 12 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 16 ರನ್ ಸಿಡಿಸಿದರು. ಅದರಲ್ಲೂ ಸಮಿತ್ ಸಿಡಿಸಿದ ಏಕೈಕ ಸಿಕ್ಸರ್ ಮೈದಾನದಲ್ಲಿ ನೆರೆದಿದ್ದವರನ್ನು ರೋಮಾಂಚನಗೊಳಿಸಿತು.
ನಿಶ್ಚಿತ್ ರಾವ್ ಬೌಲ್ ಮಾಡಿದ 12ನೇ ಓವರ್ನ ಮೊದಲ ಎಸೆತವನ್ನು ಸಮಿತ್ ಫೈನ್ ಲೆಗ್ ಮೇಲೆ ಭರ್ಜರಿ ಸಿಕ್ಸರ್ ಸಿಡಿಸಿದರು. ಸಮಿತ್ ಅವರ ಈ ಶಾಟ್ ನೋಡಿದ ಪ್ರೇಕ್ಷಕರು ಅಚ್ಚರಿ ವ್ಯಕ್ತಪಡಿಸಿದಲ್ಲದೆ ಮೈದಾನದಲ್ಲಿ ಹುಚ್ಚೆದ್ದು ಕುಣಿದರು. ಆ ನಂತರವೂ ಸಮಿತ್ ಅವರಿಂದ ಇದೇ ರೀತಿಯ ಬ್ಯಾಟಿಂಗ್ ನಿರೀಕ್ಷೆಸಲಾಗುತ್ತಿತ್ತು. ಆದರೆ ಸಮಿತ್ ಅದೇ ಓವರ್ನ ಮೂರನೇ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿಕೊಂಡರು.
ಇನ್ನು ಈ ಪಂದ್ಯದ ಬಗ್ಗೆ ಹೇಳುವುದಾದರೆ… ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮೈಸೂರು ತಂಡದ ಪರ ನಾಯಕ ಕರುಣ್ ನಾಯರ್ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 48 ಎಸೆತಗಳನ್ನು ಎದುರಿಸಿದ ನಾಯರ್ 13 ಬೌಂಡರಿ ಹಾಗೂ 9 ಭರ್ಜರಿ ಸಿಕ್ಸರ್ಗಳ ನೆರವಿನಿಂದ 124 ರನ್ ಚಚ್ಚಿದರು. ಇವರ ಈ ಸ್ಫೋಟಕ ಬ್ಯಾಟಿಂಗ್ನಿಂದಾಗಿ ಮೈಸೂರು ತಂಡ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿದೆ.