ಮಹಾರಾಷ್ಟ್ರ: ರಾಯಗಢದಲ್ಲಿ ಬಸ್ ಪಲ್ಟಿಯಾಗಿ 35 ಪ್ರಯಾಣಿಕರಿಗೆ ಗಾಯ

Updated on: May 05, 2025 | 7:57 AM

ಮಹಾರಾಷ್ಟ್ರದ ರಾಯಗಢದ ಬಳಿ ಬಸ್ ಪಲ್ಟಿಯಾಗಿದ್ದು, 35 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಭಯಭೀತ ವಾತಾವರಣ ನಿರ್ಮಾಣವಾಗಿದೆ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಯಗಢ, ಮೇ 05: ಮಹಾರಾಷ್ಟ್ರದ ರಾಯಗಢದ ಬಳಿ ಬಸ್ ಪಲ್ಟಿಯಾಗಿದ್ದು, 35 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಭಯಭೀತ ವಾತಾವರಣ ನಿರ್ಮಾಣವಾಗಿದೆ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ಅಧಿಕೃತವಾಗಿ ದೃಢೀಕರಿಸಲ್ಪಟ್ಟಿಲ್ಲವಾದರೂ, ಪ್ರಾಥಮಿಕ ವರದಿಗಳ ಪ್ರಕಾರ ಬಸ್ ತಿರುವಿನಲ್ಲಿ ನಿಯಂತ್ರಣ ತಪ್ಪಿತ್ತು ಎಂದು ಅಂದಾಜಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ