ಇಂಧನ ಉಳಿಸಲು ಎಂಎಲ್ಸಿಗಳ ಪ್ರಮಾಣವಚನಕ್ಕೆ ಬೈಕ್ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್
ಪ್ರಧಾನಿ ನರೇಂದ್ರ ಮೋದಿ ಅವರ ಇಂಧನ ಉಳಿತಾಯ ಮನವಿಯ ನಂತರ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ನಲ್ಲೇ ವಿಧಾನ ಭವನಕ್ಕೆ ತಲುಪಿದ್ದಾರೆ. ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಇಂಧನ ವೆಚ್ಚಗಳ ನಡುವೆ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ನಾಗರಿಕರಿಗೆ ಮನವಿ ಮಾಡಿದ್ದರು. ಈ ದಿಕ್ಕಿನಲ್ಲಿ ಹೆಜ್ಜೆ ಇಡುತ್ತಾ, ಪ್ರಧಾನಿ ತಮ್ಮ ಕಾರ್‌ಕೇಡ್‌ನ ಗಾತ್ರವನ್ನು 15 ಕಾರುಗಳಿಂದ ಎರಡು ಕಾರುಗಳಿಗೆ ಇಳಿಸಿದರು.
ಮುಂಬೈ, ಮೇ 14: ಪ್ರಧಾನಿ ನರೇಂದ್ರ ಮೋದಿ (PM Modi) ಇಂಧನ ಬಳಕೆ ಕಡಿಮೆ ಮಾಡುವಂತೆ ಮನವಿ ಮಾಡಿದ ನಂತರ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಕಾರು ಹಾಗೂ ಬೆಂಗಾವಲು ವಾಹನವನ್ನು ಬಿಟ್ಟು ಬೈಕ್ನಲ್ಲೇ ಇಂದು ವಿಧಾನ ಭವನಕ್ಕೆ ಆಗಮಿಸಿದ್ದಾರೆ. ಹೊಸದಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರ ಪ್ರಮಾಣವಚನ ಸಮಾರಂಭಕ್ಕೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ನಲ್ಲಿ ಸಿಎಂ ಫಡ್ನವೀಸ್ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

