ಇಂಧನ ಉಳಿಸಲು ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್

Updated on: May 14, 2026 | 11:08 PM

ಪ್ರಧಾನಿ ನರೇಂದ್ರ ಮೋದಿ ಅವರ ಇಂಧನ ಉಳಿತಾಯ ಮನವಿಯ ನಂತರ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್​ನಲ್ಲೇ ವಿಧಾನ ಭವನಕ್ಕೆ ತಲುಪಿದ್ದಾರೆ. ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಇಂಧನ ವೆಚ್ಚಗಳ ನಡುವೆ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ನಾಗರಿಕರಿಗೆ ಮನವಿ ಮಾಡಿದ್ದರು. ಈ ದಿಕ್ಕಿನಲ್ಲಿ ಹೆಜ್ಜೆ ಇಡುತ್ತಾ, ಪ್ರಧಾನಿ ತಮ್ಮ ಕಾರ್‌ಕೇಡ್‌ನ ಗಾತ್ರವನ್ನು 15 ಕಾರುಗಳಿಂದ ಎರಡು ಕಾರುಗಳಿಗೆ ಇಳಿಸಿದರು.

ಮುಂಬೈ, ಮೇ 14: ಪ್ರಧಾನಿ ನರೇಂದ್ರ ಮೋದಿ (PM Modi) ಇಂಧನ ಬಳಕೆ ಕಡಿಮೆ ಮಾಡುವಂತೆ ಮನವಿ ಮಾಡಿದ ನಂತರ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಕಾರು ಹಾಗೂ ಬೆಂಗಾವಲು ವಾಹನವನ್ನು ಬಿಟ್ಟು ಬೈಕ್​ನಲ್ಲೇ ಇಂದು ವಿಧಾನ ಭವನಕ್ಕೆ ಆಗಮಿಸಿದ್ದಾರೆ. ಹೊಸದಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರ ಪ್ರಮಾಣವಚನ ಸಮಾರಂಭಕ್ಕೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್​ನಲ್ಲಿ ಸಿಎಂ ಫಡ್ನವೀಸ್​ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More