ಮಹಾರಾಷ್ಟ್ರಕ್ಕೆ ಹೋಗಿ ಕನ್ನಡದಲ್ಲೇ ಮಾತನಾಡಿದ ಸಿಎಂ ಸಿದ್ದರಾಮಯ್ಯ

ಮಹಾರಾಷ್ಟ್ರಕ್ಕೆ ಹೋಗಿ ಕನ್ನಡದಲ್ಲೇ ಮಾತನಾಡಿದ ಸಿಎಂ ಸಿದ್ದರಾಮಯ್ಯ

Rakesh Nayak Manchi
|

Updated on:Jun 25, 2023 | 7:53 PM

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾದರು. ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಕನ್ನಡದಲ್ಲೇ ಮಾತನಾಡಿ ಗಮನಸೆಳೆದರು.

ಮುಂಬೈ: ಕರ್ನಾಟಕದ ಬೆಳಗಾವಿ ಮತ್ತು ಮಹಾರಾಷ್ಟ್ರದ ನಡುವೆ ನಡೆಯುತ್ತಿರುವ ಗಡಿ ಮತ್ತು ಭಾಷಾ ವಿವಾದದ ನಡುವೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮಹಾರಾಷ್ಟ್ರಕ್ಕೆ (Maharashtra) ತೆರಳಿ ಕನ್ನಡದಲ್ಲೇ ಭಾಷಣ ಮಾಡಿ ಗಮನಸೆಳೆದಿದ್ದಾರೆ. ಅಲ್ಲಿನ ಮರಾಠಿಗರಿಗೆ ಅರ್ಥವಾಗಲು ಮರಾಠಿಗೆ ಅನುವಾದ ಮಾಡಲಾಯಿತು. ಹೌದು, ಸಾಂಗ್ಲಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಮಹಾ ನಿರ್ಧಾರ ಸಮಾವೇಶವನ್ನು ಉದ್ಘಾಟಿಸಿ ಕನ್ನಡದಲ್ಲೇ ಭಾಷಣ ಮಾಡಿದರು. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾನಾ ಪಟೋಲೆ, ಕೇಂದ್ರದ ಮಾಜಿ ಸಚಿವ ಪೃಥ್ವಿರಾಜ್ ಚೌಹಾಣ್, ಕರ್ನಾಟಕ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಇನ್ನಿತರರು ಇದ್ದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Jun 25, 2023 07:51 PM