Video: ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ

Updated on: Aug 18, 2025 | 2:14 PM

ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವ ಕುರಿತು ಪರ-ವಿರೋಧ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಬೀದಿ ನಾಯಿಗಳ ದಾಳಿಯ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮಹಾರಾಷ್ಟ್ರದಲ್ಲಿ ನಡೆದ ಘಟನೆ ಇದು. ಬೀದಿಯ ಕಿರಿದಾದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಬೀದಿ ನಾಯಿ ಏಕಾಏಕಿ ದಾಳಿ ನಡೆಸಿದ್ದು, ಮುಖಕ್ಕೆ ಕಚ್ಚಿದೆ.

ಮಹಾರಾಷ್ಟ್ರ, ಆಗಸ್ಟ್​ 18:  ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವ ಕುರಿತು ಪರ-ವಿರೋಧ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಬೀದಿ ನಾಯಿಗಳ ದಾಳಿಯ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮಹಾರಾಷ್ಟ್ರದಲ್ಲಿ ನಡೆದ ಘಟನೆ ಇದು. ಬೀದಿಯ ಕಿರಿದಾದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಬೀದಿ ನಾಯಿ ಏಕಾಏಕಿ ದಾಳಿ ನಡೆಸಿದ್ದು, ಮುಖಕ್ಕೆ ಕಚ್ಚಿದೆ.

ಛತ್ರಪತಿ ಸಂಭಾಜಿನಗರದ ಸಿಡ್ಕೊ ಟೌನ್‌ಶಿಪ್‌ನಲ್ಲಿ ನಡೆದಿದೆ.ಒಬ್ಬ ವೃದ್ಧ ವ್ಯಕ್ತಿ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು, ಆಗ ಬೀದಿ ನಾಯಿ ಬಂದು ಏಕಾಏಕಿ ಮಹಾರಿ ಮುಖವನ್ನು ಕಚ್ಚಿದೆ. ಅವರು ನೆಲಕ್ಕೆ ಬೀಳುತ್ತಾರೆ. ಆಗ ಮತ್ತೆ ಆ ವ್ಯಕ್ತಿಯ ಮೇಲೆ ದಾಳಿಯನ್ನು ನಾಯಿ ಮುಂದುವರೆಸಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ