ಲಾರಿಯಡಿ ಸಿಲುಕಿದ ಬೈಕ್; ಪವಾಡದಂತೆ ಬಚಾವಾದ ಚಾಲಕ
ಮಹಾರಾಷ್ಟ್ರದ ಥಾಣೆಯಲ್ಲಿ ತನ್ನ ಬೈಕ್ ಲಾರಿಯಡಿ ಸಿಲುಕಿದ ನಂತರ ವ್ಯಕ್ತಿಯೊಬ್ಬರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿಯಡಿ ಬಿದ್ದಾಗ ಅಲ್ಲಿಂದ ವ್ಯಕ್ತಿ ತಪ್ಪಿಸಿಕೊಂಡು ಹೋಗುವುದನ್ನು ವಿಡಿಯೋದಲ್ಲಿ ನೋಡಬಹುದು. ಆ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ವೇಗವಾಗಿ ಬಂದ ಲಾರಿಗೆ ಬೈಕ್ ಸವಾರರೊಬ್ಬರು ಡಿಕ್ಕಿ ಹೊಡೆದರೂ ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ನ್ಯೂ ಬೈಪಾಸ್ ರಸ್ತೆ ಬಳಿಯ ಅಂಬರನಾಥ್ ಪ್ರದೇಶದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಲಾರಿಯ ಅಡಿಯಿಂದ ಆ ವ್ಯಕ್ತಿ ತಪ್ಪಿಸಿಕೊಂಡು ಹೋಗುವುದನ್ನು ವೀಡಿಯೊ ತೋರಿಸುತ್ತದೆ. ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಭಾರೀ ಘಟನೆಯ ವಿಡಿಯೋ ವೈರಲ್ ಆಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Sep 17, 2024 08:50 PM