ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ

|

Updated on: Dec 30, 2024 | 3:04 PM

ಮಹಾರಾಷ್ಟ್ರ ಸಚಿವ ನಿತೀಶ್ ರಾಣೆ ಅವರು ಕೇರಳವನ್ನು ಮಿನಿ ಪಾಕಿಸ್ತಾನಕ್ಕೆ ಹೋಲಿಸಿ, ಈ ಕಾರಣಕ್ಕಾಗಿಯೇ ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರು ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಸಚಿವ ನಿತೀಶ್​ ರಾಣೆ ಹೇಳಿದ್ದಾರೆ. ಎಲ್ಲಾ ಭಯೋತ್ಪಾದಕರು ಅವರಿಗೆ ಮತ ಹಾಕುತ್ತಾರೆ. ಇತ್ತೀಚೆಗೆ ನಡೆದ 2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಂಕಾವ್ಲಿ ಕ್ಷೇತ್ರದಿಂದ ರಾಣೆ ಗೆಲುವು ಸಾಧಿಸಿದ್ದಾರೆ.

ಮಹಾರಾಷ್ಟ್ರದ ನೂತನ ಸಚಿವ ನಿತೀಶ್​ ರಾಣೆ ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆಯುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ. ಕೇರಳ ಮಿನಿ ಪಾಕಿಸ್ತಾನ, ಅದಕ್ಕಾಗಿಯೇ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಹೇಳಿದ್ದಾರೆ.

ಕೇರಳದಲ್ಲಿ ಕೇವಲ ಉಗ್ರಗಾಮಿಗಳು ಪ್ರಿಯಾಂಕಾ ಗಾಂಧಿಗೆ ಮತ ಹಾಕುತ್ತಾರೆ ಎಂದು ಹೇಳಿದರು. ಅವರ ಭಾಷಣಕ್ಕೂ ಮುನ್ನ, ಸಚಿವ ನಿತೀಶ್ ರಾಣೆ ಅವರು ಉದ್ರೇಕಕಾರಿ ಭಾಷಣ ಮಾಡದಂತೆ ನೋಡಿಕೊಳ್ಳುವಂತೆ ಮಹಾರಾಷ್ಟ್ರ ಪೊಲೀಸರು ಕಾರ್ಯಕ್ರಮದ ಆಯೋಜಕರನ್ನು ಕೇಳಿದ್ದರು.

ನವೆಂಬರ್ 2 ರಂದು ಕೂಡ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ನಿಮಗೆ ಮುಸ್ಲಿಮರನ್ನು ಕಂಡರೇಕೆ ದ್ವೇಷ ಎಂದು ಪ್ರಶ್ನಿಸಿದಾಗ ದೇಶದಲ್ಲಿ ಶೇಕಡಾ 90ರಷ್ಟು ಹಿಂದೂಗಳು ವಾಸಿಸುತ್ತಿದ್ದಾರೆ, ಹಿಂದೂಗಳ ಹಿತಾಸಕ್ತಿಗಳ ಬಗ್ಗೆ ಚಿಂತಿಸುವುದು ಅಪರಾಧವಾಗಲಾರದು ಎಂದು ಹೇಳಿದ್ದರು.

ನಿತೇಶ್ ನಾರಾಯಣ ರಾಣೆ ಅವರು ಮಹಾರಾಷ್ಟ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದಾರೆ. ಕಂಕಾವಲಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಸರ್ಕಾರೇತರ ಸಂಸ್ಥೆ ಸ್ವಾಭಿಮಾನ್ ಸಂಘಟನೆಯ ಮುಖ್ಯಸ್ಥರೂ ಆಗಿದ್ದಾರೆ. ದ್ವೇಷಪೂರಿತ ಮಾಡಿದ ಆರೋಪದ ಮೇಲೆ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ