ಕೃಷ್ಣಾ ನದಿ ನೀರು ಕಾನೂನು ಬಾಹಿರವಾಗಿ ಬಳಸಲು ಹುನ್ನಾರ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಎಂಬಿ ಪಾಟೀಲ್ ಆರೋಪ

Edited By:

Updated on: Nov 02, 2026 | 9:23 AM

ಕೃಷ್ಣಾ ನದಿ ನೀರನ್ನು ಕಾನೂನು ಬಾಹಿರವಾಗಿ ಬಳಸಲು ಮಹಾರಾಷ್ಟ್ರ ಸರ್ಕಾರ ಹುನ್ನಾರ ನಡೆಸಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ. ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಎರಡರ ಅಧಿಸೂಚನೆಗೂ ಮುನ್ನವೇ 40 ಟಿಎಂಸಿ ನೀರನ್ನು ಉಜನಿ ಜಲಾಶಯಕ್ಕೆ ಹರಿಸುವ ಯೋಜನೆ ಕಾನೂನುಬಾಹಿರವಾಗಿದೆ ಎಂದು ವಿಜಯಪುರದಲ್ಲಿ ಅವರು ತಿಳಿಸಿದರು.

ವಿಜಯಪುರ, ನವೆಂಬರ್ 2: ಕೃಷ್ಣಾ ನದಿಯ ನೀರನ್ನು ಕಾನೂನುಬಾಹಿರವಾಗಿ ಬಳಸಲು ಮಹಾರಾಷ್ಟ್ರ ಸರ್ಕಾರ ಹುನ್ನಾರ ನಡೆಸಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಮಹಾಬಲೇಶ್ವರದಲ್ಲಿ ಕೃಷ್ಣಾ ನದಿಯು ಉಗಮ ಸ್ಥಾನವಾಗಿದೆ. ಮಹಾಬಲೇಶ್ವರದ ಬಳಿ ಕೃಷ್ಣಾ ನದಿಯಿಂದ 40 ಟಿಎಂಸಿ ನೀರನ್ನು ಭೀಮಾ ನದಿಯ ಉಜನಿ ಜಲಾಶಯಕ್ಕೆ ಹರಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಎರಡರ ಆದೇಶದ ಅಧಿಸೂಚನೆಯು ಇನ್ನೂ ಆಗಿಲ್ಲ. ಗೆಜೆಟ್ ನೋಟಿಫಿಕೇಷನ್‌ಗೂ ಮುನ್ನವೇ ಮಹಾರಾಷ್ಟ್ರ ಈ ಹೊಸ ಯೋಜನೆಯನ್ನು ಕೈಗೊಂಡಿರುವುದು ಸಂಪೂರ್ಣ ಕಾನೂನುಬಾಹಿರ. ಈ ಯೋಜನೆಯು ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಎಂ.ಬಿ. ಪಾಟೀಲ್ ಹೇಳಿದರು.

ಈ ಯೋಜನೆಯನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮುಖ್ಯಮಂತ್ರಿಗಳ ಜೊತೆಗೆ ಹಾಗೂ ನೀರಾವರಿ ಸಚಿವರ ಜೊತೆಗೆ ಚರ್ಚೆ ನಡೆಸಲಾಗಿದೆ. ಲಕ್ಷ್ಮಣ ಸವದಿ, ಹೆಚ್.ಕೆ. ಪಾಟೀಲ್ ಸೇರಿದಂತೆ ಹಲವು ಗಣ್ಯರು ಈ ವಿಷಯದಲ್ಲಿ ಪಕ್ಷಾತೀತವಾಗಿ ಒಟ್ಟಾಗಿ ನಿಲ್ಲಲಿದ್ದಾರೆ. ಕರ್ನಾಟಕದ ಎಲ್ಲಾ ನಾಯಕರು ಒಟ್ಟಾಗಿ ಮಹಾರಾಷ್ಟ್ರ ಸರ್ಕಾರದೊಂದಿಗೆ ಈ ಬಗ್ಗೆ ಮಾತನಾಡಲು ನಿರ್ಧರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More