ಮಹಾರಾಷ್ಟ್ರದಲ್ಲಿ ಮಳೆಯಬ್ಬರ: ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ

Edited By:

Updated on: Jul 24, 2026 | 5:03 PM

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ 8 ಕೆಳಹಂತದ ಸೇತುವೆಗಳು ಮುಳುಗಡೆಯಾಗಿವೆ. ಕೃಷ್ಣಾ, ದೂದಗಂಗಾ, ವೇದಗಂಗಾ ನದಿಗಳು ಮೈದುಂಬಿ ಹರಿಯುತ್ತಿದ್ದು, 90,000 ಕ್ಯೂಸೆಕ್ ಒಳಹರಿವು ಪ್ರವಾಹ ಭೀತಿ ಸೃಷ್ಟಿಸಿದೆ. ರೈತರಲ್ಲಿ ಆತಂಕ ಮೂಡಿದ್ದು, ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ.

ಚಿಕ್ಕೋಡಿ, ಜುಲೈ 24: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯು ಕರ್ನಾಟಕದ ಗಡಿ ಪ್ರದೇಶದ ಮೇಲೆ ತೀವ್ರ ಪರಿಣಾಮ ಬೀರಿದೆ. ಕರ್ನಾಟಕದಲ್ಲಿ ಮಳೆಯಿಲ್ಲದಿದ್ದರೂ, ಮಹಾರಾಷ್ಟ್ರದ ಮಳೆಯಿಂದಾಗಿ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕು ವ್ಯಾಪ್ತಿಯ ಎಂಟು ಕೆಳಹಂತದ ಸೇತುವೆಗಳು ಜಲಾವೃತವಾಗಿವೆ.  ಕೃಷ್ಣಾ ನದಿಗೆ ಸುಮಾರು 90,000 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ದೂದಗಂಗಾ ಮತ್ತು ವೇದಗಂಗಾ ನದಿಗಳು ಕೂಡ ಮೈದುಂಬಿ ಹರಿಯುತ್ತಿವೆ. ಕಲ್ಲೋಳ ಬ್ಯಾರೇಜ್ ಬಳಿಯ ದತ್ತ ಮಂದಿರವೂ ಮುಳುಗಡೆಯಾಗಿದ್ದು, ನದಿಗಳ ನೀರಿನ ಮಟ್ಟ ಏರಿಕೆ ಕಂಡಿರುವುದರಿಂದ ಕೃಷಿ ಭೂಮಿ ಜಲಾವೃತವಾಗುವ ಭೀತಿ ರೈತರಲ್ಲಿ ಆತಂಕ ಮೂಡಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More