ಮಹಾರಾಷ್ಟ್ರದ ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸಂಪರ್ಕ ಸೇತುವೆಗಳು ಜಲಾವೃತ

Edited By:

Updated on: Jul 05, 2026 | 10:21 AM

Belagavi News: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ದೂದಗಂಗಾ ಮತ್ತು ವೇದಗಂಗಾ ನದಿಗಳ ಮೂರು ಪ್ರಮುಖ ಸಂಪರ್ಕ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿವೆ. ಮಹಾರಾಷ್ಟ್ರದಲ್ಲಿರುವ ರಾಜಾಪುರ-ಜುಗಳ ಸೇತುವೆ ಮೇಲೆಯೂ ನೀರು ಹರಿಯುತ್ತಿದ್ದು, ಉಕ್ಕಿ ಹರಿಯುತ್ತಿರುವ ನದಿಗಳಿಗೆ ಯಾರೂ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಬೆಳಗಾವಿ, ಜುಲೈ 05: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ ಆರ್ಭಟ ಹಿನ್ನೆಲೆ ನಿಪ್ಪಾಣಿ ತಾಲೂಕಿನಲ್ಲಿ ಮೂರು ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಬೋಜ್ ಸಂಪರ್ಕಿಸುವ ಸೇತುವೆ ಮುಳುಗಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಬಾರವಾಡ-ಕನ್ನೂರ, ಬೋಜವಾಡಿ-ಗಜವರವಾಡಿ ಸೇತುವೆಗಳೂ ಸಂಪೂರ್ಣ ಜಲಾವೃತವಾಗಿವೆ. ಮಹಾರಾಷ್ಟ್ರದಲ್ಲಿರುವ ರಾಜಾಪುರ-ಜುಗಳ ಸೇತುವೆ ಮೇಲೆಯೂ ನೀರು ಹರಿಯುತ್ತಿದ್ದು, ಉಕ್ಕಿ ಹರಿಯುತ್ತಿರುವ ನದಿಗಳಿಗೆ ಯಾರೂ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 05, 2026 10:20 AM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More