ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಭಾರಿ ಮಳೆಯಿಂದ ಕೊಯ್ನಾ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದ್ದು, 18,665 ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗಿದೆ. ಕೊಯ್ನಾ ಜಲಾಶಯಕ್ಕೆ 59 ಸಾವಿರ ಕ್ಯೂಸೆಕ್ ನೀರು ಒಳಹರಿಯುತ್ತಿದೆ. ಕೃಷ್ಣಾ ನದಿಯ ದಂಡೆಯಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಭಾರಿ ಮಳೆಯಿಂದಾಗಿ ಪ್ರವಾಹದ ಸಾಧ್ಯತೆಯಿದೆ.
ಚಿಕ್ಕೋಡಿ, ಜುಲೈ 26: ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಇದರಿಂದ ಮಹಾರಾಷ್ಟ್ರ ರಾಜ್ಯದ ಸಾತಾರಾ ಜಿಲ್ಲೆಯಲ್ಲಿರುವ ಕೊಯ್ನಾ ಜಲಾಶಯದಿಂದ 18,665 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಸದ್ಯ ಕೋಯ್ನಾ ಜಲಾಶಯಕ್ಕೆ 59 ಸಾವಿರ ಕ್ಯೂಸೆಕ್ ನೀರು ಒಳಹರಿವು ಇದೆ. ಹೀಗಾಗಿ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ. ಕೃಷ್ಣಾ ನದಿ ಬಳಿ ತೆರಳದಂತೆ ನದಿ ಪಾತ್ರದ ಜನರಿಗೆ ಸೂಚನೆ ನೀಡಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ