ದೇವಿ ದರ್ಶನಕ್ಕೆ ಹೋಗಿದ್ದ ಬಿಜೆಪಿ ಶಾಸಕ ಪ್ರಭು ಚವ್ಹಾಣ್ಗೆ ಮಹಾರಾಷ್ಟ್ರ ಶಿವಸೇನೆ ಪುಂಡರಿಂದ ಕಿರಿಕ್
ಮಹಾರಾಷ್ಟ್ರದ ಶಿವಸೇನಾ ಕಾರ್ಯಕರ್ತರು ಕೊಲ್ಲಾಪುರದಲ್ಲಿ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರನ್ನು ತಡೆದು ಕಿರಿಕ್ ಮಾಡಿದ್ದಾರೆ. ಗಡಿ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಅಧಿವೇಶನದಲ್ಲಿ ಮಹಾಮೇಳಕ್ಕೆ ಅವಕಾಶ ನೀಡದಿರುವುದಕ್ಕೆ ಶಿವಸೇನಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ನೆಲದಲ್ಲಿ ಕನ್ನಡದಲ್ಲಿ ಉತ್ತರಿಸಿದ್ದಾರೆ.
ಬೆಳಗಾವಿ, ಡಿಸೆಂಬರ್ 11: ಗಡಿ ವಿಚಾರವಾಗಿ ಮಹಾರಾಷ್ಟ್ರದ ಶಿವಸೇನೆ ಪುಂಡರು ಮತ್ತೆ ಉದ್ಧಟತನ ಪ್ರದರ್ಶಿಸಿದ್ದಾರೆ. ಕೊಲ್ಲಾಪುರದ ಮಹಾಲಕ್ಷ್ಮಿ ದೇವಿ ದರ್ಶನಕ್ಕೆ ಹೋಗಿದ್ದ ಬಿಜೆಪಿ ಶಾಸಕ ಪ್ರಭು ಚವ್ಹಾಣ್ಗೆ (Prabhu Chauhan) ಅಡ್ಡಿಪಡಿಸಿ ಕಿರಿಕ್ ಮಾಡಿದ್ದಾರೆ. ಶಿವಸೇನೆ ಮುಖಂಡ ವಿಜಯ್ ದೇವಣೆ ನೇತೃತ್ವದಲ್ಲಿ ಅಡ್ಡಿಪಡಿಸಿದ್ದು, ಅಧಿವೇಶನ ವೇಳೆ ಮಹಾಮೇಳಕ್ಕೆ ಅವಕಾಶ ಕೊಟ್ಟಿಲ್ಲವೆಂದು ಕಿರಿಕ್ ತೆಗೆದಿದ್ದಾರೆ. ಈ ವೇಳೆ ಮಹಾರಾಷ್ಟ್ರದ ನೆಲದಲ್ಲಿ ಮಾಜಿ ಸಚಿವ ಪ್ರಭು ಚವ್ಹಾಣ್ ಕನ್ನಡದಲ್ಲಿ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಎಂಇಎಸ್ ಪ್ರತಿಭಟನೆಗೆ ಬ್ಯಾನ್ ಮಾಡಿದ್ದಾರೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Dec 11, 2024 03:39 PM
Latest Videos