ದೇವಿ ದರ್ಶನಕ್ಕೆ ಹೋಗಿದ್ದ ಬಿಜೆಪಿ ಶಾಸಕ ಪ್ರಭು ಚವ್ಹಾಣ್​ಗೆ ಮಹಾರಾಷ್ಟ್ರ ಶಿವಸೇನೆ ಪುಂಡರಿಂದ ಕಿರಿಕ್

Edited By:

Updated on: Dec 11, 2024 | 3:40 PM

ಮಹಾರಾಷ್ಟ್ರದ ಶಿವಸೇನಾ ಕಾರ್ಯಕರ್ತರು ಕೊಲ್ಲಾಪುರದಲ್ಲಿ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರನ್ನು ತಡೆದು ಕಿರಿಕ್ ಮಾಡಿದ್ದಾರೆ. ಗಡಿ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಅಧಿವೇಶನದಲ್ಲಿ ಮಹಾಮೇಳಕ್ಕೆ ಅವಕಾಶ ನೀಡದಿರುವುದಕ್ಕೆ ಶಿವಸೇನಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ನೆಲದಲ್ಲಿ ಕನ್ನಡದಲ್ಲಿ ಉತ್ತರಿಸಿದ್ದಾರೆ.

ಬೆಳಗಾವಿ, ಡಿಸೆಂಬರ್​ 11: ಗಡಿ ವಿಚಾರವಾಗಿ ಮಹಾರಾಷ್ಟ್ರದ ಶಿವಸೇನೆ ಪುಂಡರು ಮತ್ತೆ ಉದ್ಧಟತನ ಪ್ರದರ್ಶಿಸಿದ್ದಾರೆ. ಕೊಲ್ಲಾಪುರದ ಮಹಾಲಕ್ಷ್ಮಿ ದೇವಿ ದರ್ಶನಕ್ಕೆ ಹೋಗಿದ್ದ ಬಿಜೆಪಿ ಶಾಸಕ ಪ್ರಭು ಚವ್ಹಾಣ್​ಗೆ (Prabhu Chauhan) ಅಡ್ಡಿಪಡಿಸಿ ಕಿರಿಕ್​ ಮಾಡಿದ್ದಾರೆ. ಶಿವಸೇನೆ ಮುಖಂಡ ವಿಜಯ್ ದೇವಣೆ ನೇತೃತ್ವದಲ್ಲಿ ಅಡ್ಡಿಪಡಿಸಿದ್ದು, ಅಧಿವೇಶನ ವೇಳೆ ಮಹಾಮೇಳಕ್ಕೆ ಅವಕಾಶ ಕೊಟ್ಟಿಲ್ಲವೆಂದು ಕಿರಿಕ್ ತೆಗೆದಿದ್ದಾರೆ. ಈ ವೇಳೆ ಮಹಾರಾಷ್ಟ್ರದ ನೆಲದಲ್ಲಿ ಮಾಜಿ ಸಚಿವ ಪ್ರಭು ಚವ್ಹಾಣ್​ ಕನ್ನಡದಲ್ಲಿ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಎಂಇಎಸ್ ಪ್ರತಿಭಟನೆಗೆ ಬ್ಯಾನ್ ಮಾಡಿದ್ದಾರೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Dec 11, 2024 03:39 PM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More