AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶವನ್ನೇ ಬೆಚ್ಚಿಬೀಳಿಸಿದ ಅಹ್ಮದ್ ಕೃತ್ಯ!: 180 ಅಪ್ರಾಪ್ತ ಬಾಲಕಿಯರ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ವೈರಲ್

ದೇಶವನ್ನೇ ಬೆಚ್ಚಿಬೀಳಿಸಿದ ಅಹ್ಮದ್ ಕೃತ್ಯ!: 180 ಅಪ್ರಾಪ್ತ ಬಾಲಕಿಯರ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ವೈರಲ್

ಅಕ್ಷಯ್​ ಪಲ್ಲಮಜಲು​​
|

Updated on: Apr 15, 2026 | 2:51 PM

Share

ಮಹಾರಾಷ್ಟ್ರದಲ್ಲಿ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 19 ವರ್ಷದ ಅಯಾನ್ ಅಹ್ಮದ್ ತನ್ವೀರ್‌ನನ್ನು ಬಂಧಿಸಲಾಗಿದೆ. ಈತ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪರತ್ವಾಡದಲ್ಲಿ ಪ್ರತಿಭಟನೆಗಳು ನಡೆದಿವೆ. ಆರೋಪಿಯ ಮನೆಯನ್ನು ಬುಲ್ಡೋಜರ್ ಬಳಸಿ ನೆಲಸಮ ಮಾಡಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ನಡೆದ ಲೈಂಗಿಕ ದೌರ್ಜನ್ಯದ ಭೀಕರ ಪ್ರಕರಣವೊಂದು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. 19 ವರ್ಷದ ಅಯಾನ್ ಅಹ್ಮದ್ ತನ್ವೀರ್ ಎಂಬ ಯುವಕ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾನೆ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಾಗ, ಆರೋಪಿಯ ಬಳಿ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿ ಅವರನ್ನು ಶಾಕ್‌ಗೆ ಒಳಪಡಿಸಿದೆ. ಅಯಾನ್ ಅಹ್ಮದ್ ತನ್ವೀರ್ ಮೂಲತಃ ಅಮರಾವತಿಯ ಪರತ್ವಾಡ ನಿವಾಸಿ. ಈ ಗಂಭೀರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಸ್ಥಳೀಯ ಹಿಂದೂ ಸಂಘಟನೆಗಳು ಪರತ್ವಾಡದಲ್ಲಿ ತೀವ್ರ ಪ್ರತಿಭಟನೆಗಳನ್ನು ನಡೆಸಿ, ಬಂದ್​ಗೆ ಕರೆ ನೀಡಿದವು. ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ಮತ್ತು ಕಠಿಣ ಕ್ರಮದ ಭಾಗವಾಗಿ, ಸ್ಥಳೀಯ ಆಡಳಿತವು ಆರೋಪಿಯ ಮನೆಯನ್ನು ಬುಲ್ಡೋಜರ್ ಬಳಸಿ ನೆಲಸಮ ಮಾಡಿದೆ. ಪೊಲೀಸರು ಅಯಾನ್ ಅಹ್ಮದ್ ತನ್ವೀರ್‌ನನ್ನು ಈಗಾಗಲೇ ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇಂತಹ ಗಂಭೀರ ಪ್ರಕರಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಈ ಪ್ರಕರಣವು ಸಮಾಜದಲ್ಲಿ ಮಕ್ಕಳ ಸುರಕ್ಷತೆ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us