ಮಹಾತ್ಮಾ ಗಾಂಧಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದರೆ ನಾವು ಸಂವಿಧಾನ ಉಳಿಸಲು ಹೋರಾಡಬೇಕಿದೆ: ಸಿದ್ದರಾಮಯ್ಯ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗಮಿಸುವ ಮೊದಲೇ ಸಿದ್ದರಾಮಯ್ಯ ಮಹಾತ್ಮಾ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ತಮ್ಮ ಮಾತುಗಳನ್ನೂ ಮುಗಿಸಿದರು. ತಾನು ಬೇರೊಂದು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿರುವುದರಿಂದ ಅಧ್ಯಕ್ಷರು ಬರುವ ಮೊದಲೇ ಮಾತು ಮುಗಿಸಿ ಹೊರಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು. ಅವರ ಪಕ್ಕದಲ್ಲಿದ್ದ ನಜೀರ್ ಅಹ್ಮದ್, ಕಾರ್ಯಾಧ್ಯಕ್ಷರಿದ್ದಾರಲ್ಲ ಸಾಕು ಎನ್ನುತ್ತಾರೆ.
ಬೆಂಗಳೂರು: ಮಹಾತ್ಮಾ ಗಾಂಧಿಯವರರ ಪುಣ್ಯಸ್ಮರಣೆ ಮತ್ತು ಹುತಾತ್ಮರ ದಿನಾಚರಣೆಯಾಗಿರುವ ಇಂದು ನಗರದ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು ರಾಷ್ಟ್ರಪಿತನಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮಹಾತ್ಮಾ ಗಾಂಧಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು ಮತ್ತು ಕಾಂಗ್ರೆಸ್ ಪಕ್ಷ ಸಂವಿಧಾನ ವಿರೋಧಿಗಳ ವಿರುದ್ಧ ಹೋರಾಡುತ್ತಿದೆ, ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಬದ್ಧವಾಗಿದೆ, ಗಾಂಧೀಜಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡು 100 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್ ಜೈ ಸಂವಿಧಾನ ಘೋಷವಾಕ್ಯದೊಂದಿಗೆ ಗಾಂಧಿ ಭಾರತ ಕಾರ್ಯಕ್ರಮ ನಡೆಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಆರ್ಎಸ್ಎಸ್, ಬಿಜೆಪಿಯವರು ಮಹಾತ್ಮ ಗಾಂಧಿ ಹಂತಕ ಗೋಡ್ಸೆ ಆರಾಧಕರು: ಸಿದ್ದರಾಮಯ್ಯ ಕಿಡಿ