ಹೊಸ ದಾಖಲೆ… ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
IPL 2025 LSG vs CSK: ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 166 ರನ್ ಕಲೆಹಾಕಿದರೆ, ಸಿಎಸ್ಕೆ ತಂಡ ಈ ಗುರಿಯನ್ನು 19.3 ಓವರ್ಗಳಲ್ಲಿ ಚೇಸ್ ಮಾಡಿದೆ.
IPL 2025: ಐಪಿಎಲ್ನ 30ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಯಾಗಿ ಹೊರಹೊಮ್ಮಿದ್ದು ಮಹೇಂದ್ರ ಸಿಂಗ್ ಧೋನಿ (MS Dhoni). ಅದು ಕೂಡ ಕೇವಲ 26 ರನ್ಗಳಿಸುವ ಮೂಲಕ. ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು 20 ಓವರ್ಗಳಲ್ಲಿ 166 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ಸಿಎಸ್ಕೆ ಪರ ಯುವ ದಾಂಡಿಗ ಶೇಖ್ ರಶೀದ್ 27 ರನ್ ಬಾರಿಸಿದರು. ಮತ್ತೊಂದೆಡೆ ಉತ್ತಮ ಸಾಥ್ ನೀಡಿದ ರಚಿನ್ ರವೀಂದ್ರ 37 ರನ್ಗಳಿಸಿದರು. ಇನ್ನು ಕೊನೆಯ ಹಂತದಲ್ಲಿ ಕಣಕ್ಕಿಳಿದ ಮಹೇಂದ್ರ ಸಿಂಗ್ ಧೋನಿ 11 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 26 ರನ್ ಬಾರಿಸಿದರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.3 ಓವರ್ಗಳಲ್ಲಿ 168 ರನ್ ಬಾರಿಸಿ 5 ವಿಕೆಟ್ಗಳ ಗೆಲುವು ದಾಖಲಿಸಿತು.
ಈ 26 ರನ್ಗಳೊಂದಿಗೆ ಮಹೇಂದ್ರ ಸಿಂಗ್ ಧೋನಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆಯನ್ನು ಧೋನಿ ತಮ್ಮದಾಗಿಸಿಕೊಂಡರು.
ಇದಕ್ಕೂ ಮುನ್ನ ಈ ದಾಖಲೆ ಪ್ರವೀಣ್ ತಾಂಬೆ ಹೆಸರಿನಲ್ಲಿತ್ತು. 2014 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದ 42 ವರ್ಷದ ತಾಂಬೆ ಕೆಕೆಆರ್ ವಿರುದ್ಧ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದು ದಾಖಲೆ ನಿರ್ಮಿಸಿದ್ದರು. ಇದೀಗ 43ನೇ ವಯಸ್ಸಿನಲ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದು ಮಹೇಂದ್ರ ಸಿಂಗ್ ಧೋನಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್

ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ

ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
