ಬೆಳ್ಳಂಬೆಳಗ್ಗೆ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ ಬಿಎಂಟಿಸಿ ಬಸ್

Edited By:

Updated on: Dec 13, 2025 | 11:47 AM

BMTC Bus Accident: ಯಲಹಂಕ ನ್ಯೂಟೌನ್‌ನಿಂದ ಮೆಜೆಸ್ಟಿಕ್‌ಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ಸೊಂದು ಕಾವೇರಿ ಜಂಕ್ಷನ್‌ನಲ್ಲಿ ಟ್ರಾಕ್ಟರ್​​ಗೆ ಡಿಕ್ಕಿಹೊಡೆದು ಕೌಂಪೌಂಡ್​ಗೆ ನುಗ್ಗಿದ ಕಾರಣ ಅಪಘಾತ ಸಂಭವಿಸಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಭಾರಿ ಅನಾಹುತ ಸ್ವಲದರಲ್ಲೇ ತಪ್ಪಿದೆ. ಅಪಘಾತದ ಬಗ್ಗೆ ವಿಡಿಯೋ ಸಹಿತ ಮಾಹಿತಿ ಇಲ್ಲಿದೆ.

ಬೆಂಗಳೂರು, ಡಿಸೆಂಬರ್ 13: ಬೆಂಗಳೂರಿನ ಕಾವೇರಿ ಜಂಕ್ಷನ್‌ನಲ್ಲಿ ಶನಿವಾರ ಮುಂಜಾನೆ ಬಿಎಂಟಿಸಿ ಬಸ್ಸೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​ಗೆ ಗುದ್ದಿದೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಯಲಹಂಕ ನ್ಯೂಟೌನ್‌ನಿಂದ ಮೆಜೆಸ್ಟಿಕ್‌ಗೆ ತೆರಳುತ್ತಿದ್ದ ಬಿಎಂಟಿಸಿ ಬಸ್, ಫುಟ್‌ಪಾತ್ ಬಳಿ ಕಸ ತುಂಬಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಗುದ್ದಿದೆ. ದಟ್ಟವಾದ ಮಂಜಿನ ಕಾರಣ ಟ್ರ್ಯಾಕ್ಟರ್ ಗಮನಕ್ಕೆ ಬರದೆ ಅಪಘಾತ ಸಂಭವಿಸಿದ್ದಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆಯಲ್ಲಿ ಬಸ್‌ನ ಮುಂಭಾಗ ಜಖಂಗೊಂಡಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಮಾಹಿತಿ ಪಡೆದ ಸದಾಶಿವನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಸ್ ತೆರವು ಕಾರ್ಯ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More