Video: ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ

Updated on: Apr 17, 2025 | 9:09 AM

ಉತ್ತರ ಪ್ರದೇಶದ ಲಕ್ನೋದಲ್ಲಿ ಗರೀಬ್ ರಥ ಎಕ್ಸ್‌ಪ್ರೆಸ್ ರೈಲನ್ನು ಹಳಿತಪ್ಪಿಸುವ ಪ್ರಮುಖ ಪ್ರಯತ್ನ ವಿಫಲವಾಗಿದೆ. ದಿಲಾವರ್ ನಗರ ಮತ್ತು ರಹೀಮಾಬಾದ್ ನಿಲ್ದಾಣಗಳ ನಡುವಿನ ಹಳಿಗಳ ಮೇಲೆ ದಪ್ಪ ಮರದ ತುಂಡನ್ನು ಇರಿಸಲಾಗಿತ್ತು. ಕಾಶಿ ವಿಶ್ವನಾಥ ಎಕ್ಸ್‌ಪ್ರೆಸ್ ಲೋಕೊಪೈಲಟ್ ಸಕಾಲದಲ್ಲಿ ಅಪಾಯವನ್ನು ಗಮನಿಸಿ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಲಕ್ನೋ, ಏಪ್ರಿಲ್ 17: ಉತ್ತರ ಪ್ರದೇಶದ ಲಕ್ನೋದಲ್ಲಿ ಗರೀಬ್ ರಥ ಎಕ್ಸ್‌ಪ್ರೆಸ್ ರೈಲನ್ನು ಹಳಿತಪ್ಪಿಸುವ ಪ್ರಮುಖ ಪ್ರಯತ್ನ ವಿಫಲವಾಗಿದೆ. ದಿಲಾವರ್ ನಗರ ಮತ್ತು ರಹೀಮಾಬಾದ್ ನಿಲ್ದಾಣಗಳ ನಡುವಿನ ಹಳಿಗಳ ಮೇಲೆ ದಪ್ಪ ಮರದ ತುಂಡನ್ನು ಇರಿಸಲಾಗಿತ್ತು. ಕಾಶಿ ವಿಶ್ವನಾಥ ಎಕ್ಸ್‌ಪ್ರೆಸ್ ಲೋಕೊಪೈಲಟ್ ಸಕಾಲದಲ್ಲಿ ಅಪಾಯವನ್ನು ಗಮನಿಸಿ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಗರೀಬ್ ರಥ್ ರೈಲನ್ನು ಮಲೀಹಾಬಾದ್ ನಿಲ್ದಾಣದಲ್ಲಿ ನಿಲ್ಲಿಸಲಾಯಿತು. ರಹೀಮಾಬಾದ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More