Maharashtra Blast: ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು

Updated on: Mar 01, 2026 | 11:49 AM

ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ಘಟನೆ ಸಂಭವಿಸಿದೆ. ಸ್ಫೋಟಕಗಳನ್ನು ತಯಾರಿಸುವ ಫ್ಯಾಕ್ಟರಿಯಲ್ಲಿ ಸಂಭವಿಸಿದ ಸ್ಫೋಟ ಇದಾಗಿದೆ. ಘಟನೆಯಲ್ಲಿ ಮಹಿಳೆಯರು ಸೇರಿ 15 ಕಾರ್ಮಿಕರು ಸಾವನ್ನಪ್ಪಿದ್ದಾರೆ. 18 ಜನರಿಗೆ ಗಂಭೀರ ಗಾಯ, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಳಗ್ಗೆ 6 ಗಂಟೆ ಪಾಳಿಗೆ ಕೆಲಸಕ್ಕೆ ಬಂದಿದ್ದ 35 ಕಾರ್ಮಿಕರು ಸ್ಥಳದಲ್ಲಿದ್ದರು.

ನಾಗ್ಪುರ, ಮಾರ್ಚ್ 01: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ಘಟನೆ ಸಂಭವಿಸಿದೆ. ಸ್ಫೋಟಕಗಳನ್ನು ತಯಾರಿಸುವ ಫ್ಯಾಕ್ಟರಿಯಲ್ಲಿ ಸಂಭವಿಸಿದ ಸ್ಫೋಟ ಇದಾಗಿದೆ. ಘಟನೆಯಲ್ಲಿ ಮಹಿಳೆಯರು ಸೇರಿ 15 ಕಾರ್ಮಿಕರು ಸಾವನ್ನಪ್ಪಿದ್ದಾರೆ. 18 ಜನರಿಗೆ ಗಂಭೀರ ಗಾಯ, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಳಗ್ಗೆ 6 ಗಂಟೆ ಪಾಳಿಗೆ ಕೆಲಸಕ್ಕೆ ಬಂದಿದ್ದ 35 ಕಾರ್ಮಿಕರು ಸ್ಥಳದಲ್ಲಿದ್ದರು.

ಕಟೋಲ್ ತಹಸಿಲ್‌ನ ರೌಲ್ಗಾಂವ್‌ನಲ್ಲಿರುವ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಕರಾದ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ . ಕಂಪನಿಯ ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಬೆಳಗ್ಗೆ 7 ರಿಂದ 7.15 ರ ನಡುವೆ ಈ ಘಟನೆ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಹೇಳಿಕೆ ನೀಡುವುದಾಗಿ ಕಂಪನಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More